ಸ್ಯಾಂಡಲವುಡ್‍ಗೆ ಬೆಳ್ಳಂಬೆಳಿಗ್ಗೆ ಐಟಿ ಶಾಕ್!

 IT Shock to Sandalwood!

03-01-2019

 


ಸದಾಕಾಲ ರಾಜಕಾರಣಿಗಳಿಗೆ ಮಾತ್ರ ಶಾಕ್ ನೀಡುತ್ತಿದ್ದ ಐಟಿ ಅಧಿಕಾರಿಗಳು ಇದೀಗ  ಸಿನಿಮಾ ನಟ ಹಾಗೂ 
ನಿರ್ಮಾಪಕರಿಗೂ ಭರ್ಜರಿ ಶಾಕ್ ನೀಡಿದ್ದಾರೆ. ಇಂದು ಬೆಳ್ಳಂ ಬೆಳಗ್ಗೆ ಸ್ಯಾಂಡಲವುಡ್‍ನ ಗಟ್ಟಿಕುಳಗಳೆಂದೇ ಕರೆಯಿಸಿಕೊಳ್ಳುವ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಪವರ್ ಸ್ಟಾರ್ ಪುನೀತ್ ರಾಜಕುಮಾರ್, ರಾಕಿಂಗ್ ಸ್ಟಾರ್ ಯಶ್, ಸುದೀಪ್ ಹಾಗೂ ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್ ಮನೆ ಮೇಲೆ ಐಟಿ ದಾಳಿ ನಡೆದಿದೆ. 
 
ತೆರಿಗೆ ವಂಚನೆ ಆರೋಪದ ಮೇರೆಗೆ ದಾಳಿ ನಡೆದಿದೆ ಎಂದು ಶಂಕಿಸಲಾಗಿದ್ದು, ನಾಗವಾರದಲ್ಲಿರುವ ಶಿವರಾಜ್ ಕುಮಾರ್ ನಿವಾಸ ಶ್ರೀಮುತ್ತು ಮೇಲೆ ದಾಳಿ ನಡೆದಿದೆ. ಜೊತೆಗೆ ಸದಾಶಿವನಗರದಲ್ಲಿರುವ ಪುನೀತ್ ರಾಜಕುಮಾರ್ ಮನೆ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಇನ್ನು ಮಹಾಲಕ್ಷ್ಮಿ ಲೇಔಟ್‍ನಲ್ಲಿರುವ ರಾಕ್‍ಲೈನ್ ವೆಂಕಟೇಶ್ ಮನೆ ಮೇಲೂ ದಾಳಿ ನಡೆದಿದ್ದು, 8 ಕ್ಕೂ ಹೆಚ್ಚು ಅಧಿಕಾರಿಗಳು ಪರಿಶೀಲನೆಯಲ್ಲಿ ನಿರತರಾಗಿದ್ದಾರೆ. 

ಇನ್ನು ಕೆಜಿಎಫ್ ಚಿತ್ರದ ಯಶಸ್ಸಿನಲ್ಲಿದ್ದ ಯಶ್‍ಗೆ ಐಟಿ ದಾಳಿ ಶಾಕ್ ನೀಡಿದೆ. ಯಶ್ ಕತ್ರಿಗುಪ್ಪೆ ನಿವಾಸಕ್ಕೆ ಅಧಿಕಾರಿಗಳು ದೌಡಾಯಿಸಿದ್ದು, ಪರಿಶೀಲನೆಯಲ್ಲಿ ತೊಡಗಿದ್ದಾರೆ. ಇನ್ನು ಕಳೆದ ವರ್ಷ ಬಿಡುಗಡೆಯಾದ ಹೆಬ್ಬುಲಿ ಚಿತ್ರ 50 ಕೋಟಿಗೂ 
ಅಧಿಕಮೊತ್ತದ ಲಾಭ ಗಳಿಸಿದೆ ಎಂಬ ಊಹೆ ವ್ಯಕ್ತವಾದ ಹಿನ್ನೆಲೆಯಲ್ಲಿ ಅಭಿನಯ ಚಕ್ರವರ್ತಿ ಸುದೀಪ್ ಜೆ.ಪಿ.ನಗರ ನಿವಾಸದ ಮೇಲೂ ದಾಳಿ ನಡೆದಿದೆ. 

ಇದಲ್ಲದೇ ನಿರ್ಮಾಪಕರಾದ ವಿಜಯ್ ಕಿರಂಗದೂರು, ಜಯಣ್ಣ ಸಿ.ಆರ್, ಮನೋಹರ್ ನಿವಾಸದ ಮೇಲೂ ದಾಳಿ ನಡೆದಿದೆ ಎನ್ನಲಾಗಿದೆ. ಆದರೆ ಯಾವ ಕಾರಣಕ್ಕೆ ದಾಳಿ ನಡೆದಿದೆ. ದಾಳಿಯಲ್ಲಿ ಎಷ್ಟು ಮೊತ್ತದ ಆಸ್ತಿ ಪತ್ತೆಯಾಗಿದೆ? ನಟ-ನಿರ್ಮಾಪಕರು ತೆರಿಗೆ ವಂಚಿಸಿ ಆದಾಯ ಸಂಗ್ರಹಿಸಿದ್ದಾರೆ ಎಂಬುದರ ಬಗ್ಗೆ ಐಟಿ ಅಧಿಕಾರಿಗಳು  ಮಾಹಿತಿ ನೀಡಬೇಕಿದ್ದು, ಸಂಜೆ ವೇಳೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡುವ ಸಾಧ್ಯತೆ ಇದೆ. 


ಸಂಬಂಧಿತ ಟ್ಯಾಗ್ಗಳು

#Sandalwood! # Shivrajkumar # IT shock #Yesh


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ