ಸ್ಪಾ ಮೇಲೆ ಸಿಸಿಬಿ ದಾಳಿ

CCB Raid on Spa

04-01-2019

ಸ್ಪಾ ಹೆಸರಿನಲ್ಲಿ ಮಸಾಜ್ ಪಾರ್ಲರ್ ತೆರೆದು ನಡೆಸಲಾಗುತ್ತಿದ್ದ ವೇಶ್ಯಾವಾಟಿಕೆ ದಂಧೆಯ ಮನೆ ಮೇಲೆ ದಾಳಿ ನಡೆಸಿದ ಸಿಸಿಬಿ ಪೆÇಲೀಸರು ಯುವತಿಯೊರ್ವಳನ್ನು  ಬಂಧಿಸಿದ್ದಾರೆ. ಈಜಿಪುರದ ಕ್ಯಾಟಿ ರೂಡಿ ಅಲಿಯಾಸ್ ಕ್ಯಾಟಿ (29) ಬಂಧಿತ ಆರೋಪಿಯಾಗಿದ್ದಾಳೆ. ಆರೋಪಿಯು ನಡೆಸುತ್ತಿದ್ದ ವೇಶ್ಯಾವಾಟಿಕೆ ದಂಧೆಯಿಂದ ಮೂವರು ಯುವತಿಯರನ್ನು ಪೊಲೀಸರು ರಕ್ಷಿಸಿದ್ದಾರೆ. 
ಬಂಧಿತ ಆರೋಪಿಯು ಜಯನಗರದ 9ನೇ ಬ್ಲಾಕ್‍ನ ಮಾರೇನಹಳ್ಳಿಯಲ್ಲಿ ವಂಡರ್ ಸ್ಪಾ ಎನ್ನುವ ಪಾರ್ಲರ್ ಆರಂಭಿಸಿ, ಯುವತಿಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ದಂದೆ ನಡೆಸುತ್ತಿದ್ದಳು. ಆರೋಪಿಯಿಂದ ಮೂರು ಸಾವಿರ ರೂ. ನಗದು ವಶಪಡಿಸಿಕೊಂಡು, ತನಿಖೆ ಕೈಗೊಂಡಾಗ ಹಲವು ದಿನಗಳಿಂದ ದಂಧೆ ನಡೆಸುತ್ತಿರುವುದಾಗಿ ಬಾಯ್ಬಿಟ್ಟಿದ್ದಾರೆ. ಆರೋಪಿಯ ವಿರುದ್ಧ ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.


ಸಂಬಂಧಿತ ಟ್ಯಾಗ್ಗಳು

#Bangalore Raid #CCB #Spa


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ