ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಂಡಿ ಶಸ್ತ್ರಚಿಕಿತ್ಸೆ !

Kannada News

05-06-2017 179

ನವದೆಹಲಿ:-  ಕೆಲವು ವರ್ಷಗಳಿಂದ ಮಂಡಿ ನೋವಿನಿಂದ ಬಳಲುತ್ತಿರುವ ಲೋಕಸಭಾ ಕಾಂಗ್ರೆಸ್ ನಾಯಕ ಡಾ.ಎಂ.ಮಲ್ಲಿಕಾರ್ಜುನ ಖರ್ಗೆ ಅವರಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಹಲವು ವರ್ಷಗಳಿಂದ ಮಲ್ಲಿಕಾರ್ಜುನ ಖರ್ಗೆ ಅವರು ಮಂಡಿ ನೋವಿನಿಂದ ಬಳಲುತ್ತಿದ್ದರು. ಆದರೂ ಲೋಕಸಭೆಯ ಕಲಾಪಗಳು ಸೇರಿದಂತೆ ರಾಷ್ಟ್ರರಾಜಕಾರಣದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದರು.  ಆದರೆ ಮಂಡಿ ನೋವು ತೀವ್ರವಾದ ಕಾರಣ, ದೆಹಲಿಯ ಏಮ್ಸ್  ಆಸ್ಪತ್ರೆಯಲ್ಲಿ ಮಂಡಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ಹಿರಿಯ ವೈದಾಧಿಕಾರಿಗಳು ತಿಳಿಸಿದ್ದಾರೆ. ಕೆಲ ದಿನಗಳ ಕಾಲ ಖರ್ಗೆ ಅವರಿಗೆ ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ಸಲಹೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

 


ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ