ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ !

Kannada News

05-06-2017

ನವದೆಹಲಿ:- ಜಮ್ಮು ಮತ್ತು ಕಾಶ್ಮೀರದ ಬಂಡೀಪೋರಾ ಜಿಲ್ಲೆಯ ಸಿಆರ್‍ಪಿಎಫ್ ಕ್ಯಾಂಪ್ ಮೇಲೆ ಆತ್ಮಾಹುತಿ ದಾಳಿ ನಡೆಸಲು ಪ್ರಯತ್ನಿಸಿದ ನಾಲ್ವರು ಉಗ್ರರನ್ನು ಭದ್ರತಾ ಪಡೆ ಯೋಧರು ಹೊಡೆದುರುಳಿಸಿದ್ದಾರೆ. ಬೆಳಗಿನ ಜಾವ 4.10ರ ಸುಮಾರಿಗೆ ಸಿ.ಆರ್ ಪಿ.ಎಫ್ ಬಳಿ ಬಂದಿರುವ ಉಗ್ರರು ದಾಳಿ ನಡೆಸಲು ಯತ್ನ ನಡೆಸಿದ್ದಾರೆ. ಈ ವೇಳೆ ಎಚ್ಚರಗೊಂಡ ಸೇನಾ ಪಡೆ, ಉಗ್ರರ ಯತ್ನವನ್ನು ವಿಫಲಗೊಳಿಸಿ, ದಾಳಿ ನಡೆಸಲು ಮುಂದಾಗಿದ್ದ ನಾಲ್ವರು ಉಗ್ರರನ್ನು ಎನ್ಕೌಂಟರ್ ನಡೆಸಿ ಹತ್ಯೆ ಮಾಡಿದೆ. ಬಂಡೀಪೋರಾದ ಸುಂಬಲ್ 45 ಬೆಟಾಲಿಯನ್ ಸಿ.ಆರ್ ಪಿ.ಎಫ್  ಕ್ಯಾಂಪ್ ಮೇಲೆ ಉಗ್ರರ ಗುಂಪೊಂದು ದಾಳಿ ನಡೆಸಲು ಮುಂದಾಗಿತ್ತು. ಕೂಡಲೇ ಕಾರ್ಯಾಚರಣೆಗಿಳಿದ ಸೇನಾ ಪಡೆ ಉಗ್ರರ ಆತ್ಮಾಹುತಿ ದಾಳಿಯನ್ನು ವಿಫಲಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ