ಕಾಂಗ್ರೆಸ್ ಶಾಸಕರ ಕಚ್ಚಾಟಕ್ಕೆ ಬಿಜೆಪಿ ಟೀಕೆ

Bjp criticize Congress Mla Fighting

21-01-2019

ಬಿಜೆಪಿ ಶಾಸಕ ಆನಂದ್ ಸಿಂಗ್ ಅವರ ಮೇಲಿನ ಹಲ್ಲೆ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿ ನಾಯಕರು ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸರ್ಕಾರದ ವಿರುದ್ಧ ತೀವ್ರ ಟೀಕಾ ಪ್ರಹಾರ ಮುಂದುವರೆಸಿದ್ದಾರೆ. ಟ್ವಿಟ್ಟರ್, ಫೇಸ್ ಬುಕ್ ಸೇರಿ ಸಾಮಾಜಿಕ ಜಾಲ ತಾಣಗಳಲ್ಲಿ ಕಾಂಗ್ರೆಸ್ ನಾಯಕರ ಮೇಲೆ ಮುಗಿ ಬಿದ್ದಿದ್ದಾರೆ.

ಹಲ್ಲೆ ಪ್ರಕರಣದ ಬಗ್ಗೆ ಬಿಜೆಪಿ ಸರಣಿ ಟ್ವೀಟ್ ಗಳನ್ನು ಮಾಡಿದ್ದು, ಕುಮಾರಸ್ವಾಮಿ ಸರ್ಕಾರದಲ್ಲಿ ಕಾಂಗ್ರೆಸ್ ಶಾಸಕರಿಗೆ ಜೀವಭಯ ಕಾಡುತ್ತಿದೆ. ಸಂವಿಧಾನದ ಬಗ್ಗೆ ಬೋಧನೆ ಮಾಡುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಗುಂಡೂರಾವ್ ಹಲ್ಲೆ ಮಾಡಿದ ಶಾಸಕರನ್ನು ಅಮಾನತುಗೊಳಿಸಬೇಕು. ಈ ಮೂಲಕ ಸಂವಿಧಾನದ ಗೌರವ ಕಾಪಾಡಬೇಕು ಎಂದು ಒತ್ತಾಯಿಸಿದೆ. ಈ ಘಟನೆ ಫೇಸ್ ಬುಕ್ ಸೇರಿ ಇತರ ಸಾಮಾಜಿಕ ಜಾಲತಾಣಗಳಲ್ಲೂ ಪ್ರತಿಧ್ವನಿಸುತ್ತಿದೆ.

ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಎಂ. ರವಿಕುಮಾರ್ ಮಾತನಾಡಿ, ಹಲ್ಲೆ ನಡೆದಿಲ್ಲ ಎಂದು ಸಚಿವ ಡಿ.ಕೆ. ಶಿವಕುಮಾರ್ ನೀಡಿರುವ ಹೇಳಿಕೆ ನಾಚಿಕೆಗೇಡಿನಿಂದ ಕೂಡಿದೆ. ಬಿಜೆಪಿಯವರು ಲಫಂಗ ರಾಜಕಾರಣ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಟೀಕಿಸುತ್ತಾರೆ. ಇದು ಯಾವ ರಾಜಕಾರಣ ಎಂಬುದನ್ನು ಅವರೇ ಹೇಳಬೇಕು. ಜೆಡಿಎಸ್ - ಕಾಂಗ್ರೆಸ್ ನಡುವೆ ಕುಮಾರ ಸ್ವಾಮಿ ಅವರನ್ನು ಬದಲಾವಣೆ ಮಾಡುವ, ಆ ಸ್ಥಾನಕ್ಕೆ ಸಿದ್ದರಾಮಯ್ಯ ಅವರನ್ನು ತರುವ ಪ್ರಯತ್ನ ನಡೆಯುತ್ತಿದೆ. ಇದೇ ಕಾರಣಕ್ಕೆ ಜಗಳ ನಡೆಯುತ್ತಿದೆ ಎಂದರು.

ಮತ್ತೊಂದೆಡೆ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಮಾತನಾಡಿ, ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರರಿಗೆ ನೈತಿಕತೆ ಇದ್ದರೆ ಈ ಬಗ್ಗೆ ಮಾಹಿತಿ ನೀಡಬೇಕು. ಬಿಜೆಪಿ ರೆಸಾರ್ಟ್ ರಾಜಕಾರಣ ಮಾಡುತ್ತಿದೆ ಎಂದು ಅಂತ ಅಪಪ್ರಚಾರ ಮಾಡಲಾಯಿತು. ಆದರೆ ನಾವು ನಾವು ರಾಷ್ಟ್ರೀಯ ಕಾರ್ಯಕಾರಣಿಯಲ್ಲಿ ಭಾಗವಹಿಸಿ ಸ್ವಂತ ಖರ್ಚಿನಲ್ಲಿ ಹೋಟೆಲ್ ನಲ್ಲಿ ಉಳಿದಿದ್ದೇವು. ಆದರೆ ಕಾಂಗ್ರೆಸ್ ನವರು ರೆಸಾರ್ಟ್ ನಲ್ಲಿ ಮಾಡಿದ್ದೇನು ಎಂದು ಪ್ರಶ್ನಿಸಿದರು.

ದೇವೇಗೌಡರು ನಮಗೆ ಮೋಜು ಮಸ್ತಿ ಮಾಡುತ್ತಿದ್ದೀರಾ ಎಂದು ಪ್ರಶ್ನಿಸಿದ್ದರು. ಆದರೆ ಅವರ ಪುತ್ರ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಅವರು ಹೊಸ ವರ್ಷ ಆಚರಣೆಗಾಗಿ ವಿದೇಶಕ್ಕೆ ಹೋಗಿದ್ದರು. ಇದೀಗ ನಮ್ಮನ್ನು ಮೋಜು, ಮಸ್ತಿ ಬಗ್ಗೆ ಪ್ರಶ್ನಿಸಲು ನಿಮಗೆ ಯಾವ ನೈತಿಕತೆ ಇದೆ ಎಂದರು.

ಕುಮಾರಸ್ವಾಮಿ ವಿರುದ್ಧ ಶಾಸಕರನ್ನು ಎತ್ತಿಕಟ್ಟುತ್ತಿದ್ದು, ಕೆಲವರು ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಈ ಗಲಾಟೆಯಿಂದ ಗೊಂದಲ ಸೃಷ್ಟಿಯಾಗಿದೆ. ಇಷ್ಟಕ್ಕೂ ರೆಸಾರ್ಟ್ ನಲ್ಲಿ ನಸುಕಿನ ವರೆಗೆ ಮದ್ಯ ಸರಬರಾಜು ಮಾಡಲು ಅವಕಾಶ ನೀಡಿದವರು ಯಾರು. ಅಬಕಾರಿ ಇಲಾಖೆಯನ್ನು ಸರ್ಕಾರ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ದೂರಿದರು.


ಸಂಬಂಧಿತ ಟ್ಯಾಗ್ಗಳು

#Bjp #Mla #Criticize #Congres


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ