ಹೈಕಮಾಂಡ್ ಸೂಚಿಸಿದ್ರೆ ರಾಜೀನಾಮೆ ಕೊಡ್ತಿನಿ- ಸಚಿವ ಪುಟ್ಟರಂಗಶೆಟ್ಟಿ

If High Command Ask I will Resign -Minister Puttarangashetty

23-01-2019

ಪಕ್ಷದ ಹೈಕಮಾಂಡ್ ಸೂಚಿಸಿದರೆ, ಈ ಕ್ಷಣವೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧನಿರುವುದಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ.ಚಾಮರಾಜನಗರ ತಾಲ್ಲೂಕಿನ ಮಹಂತಾಳಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಹೈಕಮಾಂಡ್ ನನ್ನನ್ನು ಮಂತ್ರಿಯನ್ನಾಗಿ ಮಾಡಿದೆ. ಸಚಿವ ಸ್ಥಾನಕ್ಕೆ ನಾಳೆಯೇ ರಾಜೀನಾಮೆ ನೀಡು ಎಂದು ಸೂಚಿಸಿದರೆ, ತಾವು ಹಿಂದು – ಮುಂದು ನೋಡದೆ ರಾಜೀನಾಮೆ ನೀಡಲು ಸಿದ್ಧನಿದ್ದೇನೆ ಎಂದರು.


ಪಕ್ಷದ ಹೈಕಮಾಂಡ್ ರಾಜೀನಾಮೆಗೆ ಸೂಚಿಸಿದರೆ ಅದರಲ್ಲಿ ತ್ಯಾಗದ ಪ್ರಶ್ನೆಯೇ ಬರುವುದಿಲ್ಲ. ಪಕ್ಷದ ಹಿತಕ್ಕಾಗಿ ಸಚಿವ ಸ್ಥಾನ ಬಿಟ್ಟುಕೊಡಲು ಸಿದ್ಧನಿರುವುದಾಗಿ ತಿಳಿಸಿದರು.ಸಚಿವ ಸ್ಥಾನ ಸಿಗದೆ ಅತೃಪ್ತಗೊಂಡಿರುವ ಶಾಸಕರಿಗಾಗಿ ಸಚಿವ ಸ್ಥಾನ ಬಿಟ್ಟುಕೊಡುತ್ತೀರಿಯೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಹೈಕಮಾಂಡ್ ಹೇಳಿದರೆ, ಒಂದು ಕ್ಷಣವೂ ಸಚಿವ ಸ್ಥಾನದಲ್ಲಿ ಮುಂದುವರೆಯುವುದಿಲ್ಲ. ಈ ಮೂಲಕ ಪಕ್ಷನಿಷ್ಟೆಯನ್ನು ಪ್ರದರ್ಶಿಸುವುದಾಗಿ ತಿಳಿಸಿದರು.


ಇತ್ತೀಚೆಗೆ ವಿಧಾನಸೌಧದ ಬಳಿ ಸರಿಸುಮಾರು 26 ಲಕ್ಷ ರೂ. ನಗದು ಹಣ ಸಿಕ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಚಿವ ಪುಟ್ಟರಂಗಶೆಟ್ಟಿ ಅವರ ಟೈಪಿಸ್ಟ್‌ನನ್ನು ಬಂಧಿಸಲಾಗಿದೆ.ಈ ಸಂಬಂಧ ಸಚಿವ ಪುಟ್ಟರಂಗಶೆಟ್ಟಿ ರಾಜೀನಾಮೆ ನೀಡುವಂತೆ ವಿರೋಧ ಪಕ್ಷ ಬಿಜೆಪಿಯಿಂದ ಆಗ್ರಹ ಕೇಳಿಬಂದಿತ್ತು. ಈ ಬೆನ್ನಲ್ಲೇ ಪಕ್ಷದ ವರಿಷ್ಠರು ಸೂಚಿಸಿದರೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧನಿರುವುದಾಗಿ ಹೇಳಿದ್ದಾರೆ.


ಸಂಬಂಧಿತ ಟ್ಯಾಗ್ಗಳು

#High command #Minister #Resign #Puttaranga Shetty


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ