ಪ್ರಿಯಾಂಕ ಖರ್ಗೆ ರಾಜೀನಾಮೆಗೆ ಒತ್ತಾಯ

Bjp demands for  Priyanka

24-01-2019

ಸರ್ಕಾರದ ಶೋಕಾಚರಣೆ ಆದೇಶ ಉಲ್ಲಂಘಿಸಿ ಖಾಸಗಿ ಹೋಟೆಲಿನಲ್ಲಿ ಸರ್ಕಾರಿ ಕಾರ್ಯಕ್ರಮ ನಡೆಸಿದ ಸಚಿವ ಪ್ರಿಯಾಂಕ ಖರ್ಗೆ ರಾಜೀನಾಮೆಯನ್ನು ಮುಖ್ಯಮಂತ್ರಿ ಪಡೆಯಬೇಕು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಆಗ್ರಹಿಸಿದ್ದಾರೆ.

ವಿಧಾನ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಸಂವಿಧಾನ ಘೋಷಣೆ"ಕಾರ್ಯಕ್ರಮಕ್ಕೆ ರಾಷ್ಟ್ರವಿರೋಧಿ ಘೋಷಣೆ ಕೂಗಿದ ಕನ್ಹಯ್ಯ ಕುಮಾರ್, ವಿವಾದಾತ್ಮಕ ನಾಯಕ ಅಸಾದುದ್ದೀನ್ ಓವೈಸಿ ಅವರನ್ನು ಕರೆಸಿ ಕಾರ್ಯಕ್ರಮ ನಡೆಸುವ ಮೂಲಕ ಡಾ.ಶಿವಕುಮಾರ ಶ್ರೀಗಳಿಗೆ ಅಪಮಾನ ಮಾಡಲಾಗಿದೆ.

ಸರ್ಕಾರಿ ಪ್ರಾಯೋಜಕತ್ವದಲ್ಲಿ ಸಂವಿಧಾನ ಸಂಭಾಷಣೆ ಕಾರ್ಯಕ್ರಮ ನಡೆಸಿದ್ದಕ್ಕೆ ಸಚಿವ ಪ್ರಿಯಾಂಕ ಖರ್ಗೆ ರಾಜ್ಯದ ಜನರಲ್ಲಿ ಕ್ಷಮೆ ಕೇಳಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಇದೇ ವೇಳೆ ಮಾತನಾಡಿದ ಬಿಜೆಪಿ ಶಾಸಕ ವೈ.ಎ.ನಾರಾಯಣಸ್ವಾಮಿ, ಭಾನುವಾರ ಸಂಜೆಯೇ ಕಾರ್ಯಕ್ರಮ ನಡೆಸದಂತೆ ಪೆÇಲೀಸರಿಗೆ ದೂರು ಕೊಡಲಾಗಿತ್ತು. ಆದರೂ ಸಮಾಜ ಕಲ್ಯಾಣ ಇಲಾಖೆ ಕೋಟ್ಯಾಂತರ ರೂಪಾಯಿ ಹಣ ಖರ್ಚು ಮಾಡಿ ಕಾರ್ಯಕ್ರಮ ನಡೆಸಿರುವುದು ಖಂಡನೀಯ ಎಂದರು.

ಮುಖ್ಯಮಂತ್ರಿ ಅವರ ಮೇಲೆ ಒತ್ತಡ ತಂದು ಸಚಿವರು ಕಾರ್ಯಕ್ರಮ ಮಾಡಿದ್ದಾರೆ. ಹೀಗಾಗಿ ಪ್ರಿಯಾಂಕ ಖರ್ಗೆಯಿಂದ ಸರ್ಕಾರ ರಾಜೀನಾಮೆ ಪಡೆಯಬೇಕು.ಏಪ್ರಿಲ್  2015ರಲ್ಲಿಯೇ ಅಸಾದುದ್ದೀನ್ ಓವೈಸಿ ಬೆಂಗಳೂರು ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ.  ಹೀಗಿದ್ದರೂ ಕಾನೂನು ಮೀರಿ, ವಿವಾದಾತ್ಮಕ ನಾಯಕನನ್ನು ಕರೆಸಿ ಕಾರ್ಯಕ್ರಮ ನಡೆಸಲಾಗಿದೆ.  ಕಾರ್ಯಕ್ರಮ ರದ್ದುಗೊಳಿಸಿರುವುದಾಗಿ ಪ್ರಕಟಿಸಿ ಬಳಿಕ ಹೊರಗೆ ತಿಳಿಯದಂತೆ ಕಾರ್ಯಕ್ರಮ ನಡೆಸಿದ್ದರ ಉದ್ದೇಶವೇನು ಎಂಬುದನ್ನು ಜನತೆಯ ಮುಂದಿಡಬೇಕೆಂದು ಬಿಜೆಪಿ ನಾಯಕರು ಒತ್ತಾಯಿಸಿದರು.
 


ಸಂಬಂಧಿತ ಟ್ಯಾಗ್ಗಳು

#Priyanka Karghe #Bjp #Resignation #Demands


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ