ರಾಜ್ಯದಲ್ಲಿ ಸಂಪೂರ್ಣ ಮದ್ಯಪಾನ ನಿಷೇಧಕ್ಕೆ ಆಗ್ರಹ !

Kannada News

05-06-2017

ಮಂಡ್ಯ:-  ಬಿಹಾರ ರಾಜ್ಯದಲ್ಲಿ ಮದ್ಯಪಾನ ನಿಷೇಧಿಸಿದಂತೆಯೇ ,ರಾಜ್ಯದಲ್ಲಿ ಮದ್ಯಪಾನ ನಿಷೇಧಕ್ಕೆ ಆಗ್ರಹಿಸಿ ಮದ್ದೂರಿನ ಶಿವಪುರದಿಂದ ಆದಿಚುಂಚನಗಿರಿವರೆಗೆ ಜಾಥಾ ವನ್ನು ನಡೆಸಲಾಯಿತು. ಶಿವಪುರ ಸತ್ಯಾಗ್ರಹ ಸೌಧದಿಂದ ಆರಂಭವಾದ ಜಾಥಾ ಸಾಮಾಜಿಕ ಹೋರಾಟಗಾರ ರವಿ ಕೃಷ್ಣ ರೆಡ್ಡಿ ನೇತೃತ್ವದಲ್ಲಿ ನಡೆಯಿತು. ಮದ್ಯಪಾನ ನಿಷೇಧ ಹೋರಾಟ ಸಮಿತಿ, ರೈತ ಸಂಘ, ಕರ್ನಾಟಕ ಜನಶಕ್ತಿ ಸೇರಿದಂತೆ ವಿವಿಧ ಸಂಘಟನೆಗಳು ಜಾಥಾದಲ್ಲಿ ಭಾಗಿಯಾಗಿವೆ. ಗಾಂಧಿವಾಧಿ ಸುರೇಂದ್ರ ಕೌಲಗಿ ಅವರಿಂದ ಜಾಥಾಗೆ ಚಾಲನೆ ನೀಡಲಾಯಿತು. ಜಾಥಾದಲ್ಲಿ ಮಹಿಳೆಯರು, ವಿವಿಧ ಸಂಘಟನೆಗಳ ಮುಖಂಡರು ಸೇರಿದಂತೆ ನೂರಾರು ಮಂದಿ ಭಾಗಿಯಾಗಿದ್ದರು. ರಾಜ್ಯಾದ್ಯಂತ ಸಂಪೂರ್ಣವಾಗಿ ಮದ್ಯಪಾನ ನಿಷೇಧ ಮಾಡುವಂತೆ ಆಗ್ರಹಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ