ಪತ್ರಿಕೋದ್ಯಮ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು 

The suspicious death of a journalist student

24-01-2019

ಪತ್ರಿಕೋದ್ಯಮ ವಿದ್ಯಾರ್ಥಿನಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಅನಾರೋಗ್ಯಕ್ಕೆ ಬೇಸತ್ತು ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಶರಣಾಗಿರಬಹುದೆಂದು ಶಂಕಿಸಲಾಗಿದೆ. ಬೆಂಗಳೂರಿನ  ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಮುಂಬೈ ಮೂಲದ ಸೋಫಿಯಾ ದಮನಿ(20)ಎಂದು ಅನುಮಾನಾಸ್ಪದವಾಗಿ ಮೃತಪಟ್ಟ ವಿದ್ಯಾರ್ಥಿನಿ. 

ಮೃತ ವಿದ್ಯಾರ್ಥಿನಿ ಸೋಫಿಯಾ, ಕೆ.ನಾರಾಯಣಪುರ ದ ಕ್ರಿಸ್ತಜಯಂತಿ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮದ 4ನೇ ಸೆಮಿಸ್ಟರ್ ಓದುತ್ತಿದ್ದರು. ಈಕೆಯ ಮೃತದೇಹ  ಹಾಸ್ಟೆಲ್‍ನ ಕೋಣೆಯ ಹಾಸಿಗೆಯ ಮೇಲೆ ಬುಧವಾರ ಸಂಜೆ ಮಲಗಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ. ವಿದ್ಯಾಭ್ಯಾಸಕ್ಕಾಗಿ ಕಳೆದ ಎರಡು ವರ್ಷಗಳ ಹಿಂದೆ ಮುಂಬೈಯಿಂದ ನಗರಕ್ಕೆ ಬಂದಿದ್ದ ಸೋಫಿಯಾ ಕ್ರಿಸ್ತಜಯಂತಿ ಕಾಲೇಜಿಗೆ ಸೇರಿದ್ದು ಕಾಲೇಜು ಬಳಿಯ ಹಾಸ್ಟೆಲ್‍ನಲ್ಲಿ ವಾಸಿಸುತ್ತಿದ್ದರು.

ಇತ್ತೀಚಿಗೆ ಅನಾರೋಗ್ಯದಿಂದ ಬಳಲುತ್ತಿದ್ದ ಆಕೆಯು ಮಾನಸಿಕ ಅಸ್ವಸ್ಥತೆಗೊಳಗಾಗಿದ್ದರು ಎಂದು ತಿಳಿದುಬಂದಿದೆ. ಸಹಪಾಠಿಗಳ ಜೊತೆ ಬುಧವಾರ ಬೆಳಿಗ್ಗೆ ಮಾತಾಡಿದ್ದ ಸೋಫಿಯಾ ಈ ನೀವು ಕಾಲೇಜಿಗೆ ಹೋಗಿ ನಾನು ಬರುವುದಿಲ್ಲ ಎಂದು ತಿಳಿಸಿದ್ದಾಳೆ. ಬಳಿಕ ಸಂಜೆ ಸಹಪಾಠಿಗಳು ಹಾಸ್ಟೆಲ್‍ಗೆ ವಾಪಸಾದಾಗ ಶವವಾಗಿ ಪತ್ತೆಯಾಗಿದ್ದಾರೆ.

ಸೋಫಿಯಾ ಅತಿಯಾದ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು ಮರಣೋತ್ತರ ಪರೀಕ್ಷೆಗಾಗಿ ಸೋಫಿಯಾ ಮೃತದೇಹವನ್ನು ಅಂಬೇಡ್ಕರ್ ಆಸ್ಪತ್ರೆಗೆ ರವಾನಿಸಲಾಗಿದೆ. ಅನುಮಾನಾಸ್ಪದವಾಗಿ ಸೋಫಿಯಾ ಮೃತಪಟ್ಟ ಹಿನ್ನೆಲೆಯಲ್ಲಿ ದೂರು ನೀಡಲಾಗಿದ್ದು, ಕೊತ್ತನೂರು ಪೆÇಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 74(ಅಸಹಜ ಸಾವು) ಅಡಿ ಪ್ರಕರಣ ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

#Girl Death #Sofiya #Bangalore #Suscide


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ