ಜಾರ್ಜ್ ಫರ್ನಾಂಡಿಸ್ ನಿಧನ

George fernandes Passedaway

29-01-2019

ವಯೋಸಹಜ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕೇಂದ್ರದ ಮಾಜಿ ರಕ್ಷಣಾ ಸಚಿವ ಹಾಗೂ ಚತುರ ರಾಜಕಾರಣಿ ಜಾರ್ಜ್ ಫರ್ನಾಂಡಿಸ್ ನವದೆಹಲಿಯಲ್ಲಿ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.  ಅಟಲ್ ಬಿಹಾರಿ ವಾಜಪೇಯಿ ಮಂತ್ರಿಮಂಡಲದಲ್ಲಿ ರಕ್ಷಣಾ ಸಚಿವರಾಗಿದ್ದ ಜಾರ್ಜ್ ಫರ್ನಾಂಡಿಸ್ ದೇಶ ಕಂಡ ಅತ್ಯುತ್ತಮ ರಕ್ಷಣಾ ಸಚಿವರಲ್ಲಿ ಒಬ್ಬರು ಎಂಬ ಖ್ಯಾತಿಗೂ ಪಾತ್ರರಾಗಿದ್ದರು. 


ಅಗಸ್ಟ್ 2009 ರಿಂದ ಜುಲೈ 2010 ರವರೆಗೂ ರಾಜ್ಯಸಭಾ ಸದಸ್ಯರಾಗಿ ಕೊನೆಯದಾಗಿ ಸಂಸತ್ತಿನಲ್ಲಿ ಕಾಣಿಸಿಕೊಂಡ ಜಾರ್ಜ್ ಫರ್ನಾಂಡಿಸ್, ಇತ್ತೀಚಿನ ಕೆಲ ವರ್ಷಗಳಿಂದ ಅಲ್ಹ್ಜಮೈರ್ ಕಾಯಿಲೆಯಿಂದ ಬಳಲುತ್ತಿದ್ದರು. 
ವಿ.ಪಿ.ಸಿಂಗ್ ಸರ್ಕಾರದ ಅವಧಿಯಲ್ಲಿ ರೈಲ್ವೆ ಸಚಿವರಾಗಿದ್ದ ಜಾರ್ಜ್ ಫರ್ನಾಂಡಿಸ್ ನಿಧನಕ್ಕೆ ಎಲ್ಲೆಡೆ ಶೋಕ ವ್ಯಕ್ತವಾಗಿದೆ. ಮಂಗಳೂರು ಮೂಲದ ಜಾರ್ಜ್ ಫರ್ನಾಂಡಿಸ್, ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಸಾಮಾಜಿಕ ಹೋರಾಟಗಳನ್ನು ಸಂಘಟಿಸಿದ್ದರು. ಉತ್ತಮ ಭಾಷಣಕಾರರು ಹಾಗೂ ಮುತ್ಸದ್ದಿ ರಾಜಕಾರಣಿ ಹಾಗೂ ಸರಳ ವ್ಯಕ್ತಿಯಾಗಿ ಜಾರ್ಜ್ ಫರ್ನಾಂಡಿಸ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. 


ಜಾರ್ಜ್ ಫರ್ನಾಂಡಿಸ್ ಹೆಸರು ಶವಪೆಟ್ಟಿಗೆ ಭ್ರಷ್ಟಾಚಾರ ಹಗರಣದಲ್ಲಿ ಕೇಳಿಬಂದ ಬಳಿಕ ಅವರು ಸಾಕಷ್ಟು ನೋವು ಅಭವಿಸಿದ್ದರಲ್ಲದೇ, ಅನಾರೋಗ್ಯಕ್ಕೂ ತುತ್ತಾಗಿದ್ದರು. ಕಾರ್ಮಿಕ ನಾಯಕರಾಗಿಯೂ ಗುರುತಿಸಿಕೊಂಡಿದ್ದ ಜಾರ್ಜ್ ನಿಧನಕ್ಕೆ ಎಲ್ಲೆಡೆ ಶೋಕ ಸಂತಾಪ ವ್ಯಕ್ತವಾಗಿದೆ. 


ಸಂಬಂಧಿತ ಟ್ಯಾಗ್ಗಳು

#George fernandes #Defence #Former Minister #Mangalore


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ