ಬಡ್ತಿ ಮೀಸಲಾತಿ ತಿದ್ದುಪಡಿ ಕಾಯಿದೆ ಜಾರಿಗೆ ನಿರ್ಧಾರ

 Decision to implement the Promotion Amendment Act

30-01-2019

ಸರ್ವೋಚ್ಚ ನ್ಯಾಯಾಲಯ ಅಂತಿಮ ತೀರ್ಪು ನೀಡುವ ಮುನ್ನವೇ ಬಡ್ತಿ ಮೀಸಲಾತಿ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸಲು ಇಂದಿಲ್ಲಿ ಸಚಿವ ಸಂಪುಟ ನಿರ್ಧರಿಸಿದೆ.

ಈ ಹಿಂದೆ ಸುಪ್ರೀಂಕೋರ್ಟ್ ಬಡ್ತಿ ಮೀಸಲಾತಿಗೆ ಸಂಬಂಧಿಸಿದಂತೆ ನೀಡಿದ ಆದೇಶದ ವಿರುದ್ಧ ವ್ಯಾಪಕ ಕೂಗು ಕೇಳಿ ಬಂದ ಹಿನ್ನೆಲೆಯಲ್ಲಿ ಹಿಂದಿನ ಸರ್ಕಾರ ಬಡ್ತಿ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತಂದಿತ್ತಲ್ಲದೆ ವಿಧಾನಮಂಡಲದ ಮುಂದೆ ಮಂಡಿಸಿ ಅಂಗೀಕರಿಸಿತ್ತು.

ಹೀಗೆ ಅಂಗೀಕರಿಸಲಾದ ತಿದ್ದುಪಡಿ ವಿಧೇಯಕವನ್ನು ರಾಷ್ಟ್ರಪತಿಗಳಿಗೆ ಕಳುಹಿಸಿ ಅಂಕಿತ ಪಡೆಯಲಾಗಿದ್ದು ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಆದೇಶಕ್ಕೆ ವ್ಯತಿರಿಕ್ತವಾದ ಕಾಯ್ದೆಯನ್ನು ಇದೀಗ ಸರ್ಕಾರ ಅಂಗೀಕರಿಸಿದೆ.

ಆದರೆ ಸುಪ್ರೀಂಕೋರ್ಟ್‍ನ ಅಂತಿಮ ಆದೇಶಕ್ಕೆ ರಾಜ್ಯ ಸರ್ಕಾರ ಬದ್ಧವಾಗಿದ್ದು ಅಂತಿಮ ತೀರ್ಪಿನ ಸ್ವರೂಪ ಹೇಗಿರುತ್ತದೋ?ಅದನ್ನು ಹಾಗೆಯೇ ಜಾರಿಗೆ ತರುತ್ತೇವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡ ಇಂದಿಲ್ಲಿ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.

ಸಚಿವ ಸಂಪುಟ ಸಭೆಯ ನಂತರ ಮಾತನಾಡಿದ ಅವರು,ಈ ಮುನ್ನ ಬಡ್ತಿ ಮೀಸಲಾತಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಒಂದು ತೀರ್ಪು ನೀಡಿತ್ತು.ಆದರೆ ಅದರ ಕುರಿತು ನಾನಾ ವ್ಯಾಖ್ಯಾನಗಳು ಬಂದ ಹಿನ್ನೆಲೆಯಲ್ಲಿ ಅದರಲ್ಲಿ ಕೆಲ ತಿದ್ದುಪಡಿಗಳನ್ನು ಮಾಡಿ ರಾಜ್ಯ ವಿಧಾನಮಂಡಲದಲ್ಲಿ ಅದನ್ನು ಅಂಗೀಕರಿಸಲಾಗಿತ್ತು ಎಂದರು.

ಸರ್ಕಾರದ ಈ ತೀರ್ಮಾನದಿಂದ ನ್ಯಾಯಾಂಗ ನಿಂದನೆಯಾದಂತಾಗುವುದಿಲ್ಲವೇ?ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು,ಸದರಿ ತಿದ್ದುಪಡಿ ಕಾಯ್ದೆಗೆ ರಾಷ್ಟ್ರಪತಿಗಳು ಅಂಕಿತ ಹಾಕಿರುವುದರಿಂದ ಇದನ್ನು ಂiÀiಥಾವತ್ತಾಗಿ ಜಾರಿಗೆ ತರುತ್ತೇವೆ ಎಂದು ಸುಪ್ರೀಂಕೋರ್ಟ್‍ಗೆ ರಾಜ್ಯದ ಪರ ವಕೀಲರಾದ ಮುಕುಲ್ ರೋಹ್ಟಗಿ ಅವರು ವಿವರಿಸಿದ್ದಾರೆ ಎಂದರು.

ಆದರೆ ಸುಪ್ರೀಂಕೋರ್ಟ್ ಇದಕ್ಕೆ ಒಪ್ಪಿಗೆಯನ್ನೂ ನೀಡಿಲ್ಲ.ನಿರಾಕರಣೆಯನ್ನೂ ಮಾಡಿಲ್ಲ.ಆದರೆ ರಾಜ್ಯದ ಪರ ವಕೀಲರು ಹೇಳಿದ್ದನ್ನು ಸುಪ್ರೀಂಕೋರ್ಟ್ ದಾಖಲಿಸಿಕೊಂಡಿದೆ.ಅದೇ ರೀತಿ ನಮ್ಮ ವಕೀಲರೂ,ಸರ್ವೋಚ್ಚ ನ್ಯಾಯಾಲಯದ ಅಂತಿಮ ಆದೇಶವನ್ನು ಜಾರಿಗೊಳಿಸುವುದು ಅನಿವಾರ್ಯ ಎಂದಿದ್ದಾರೆ.

ಇದನ್ನು ಗಮನದಲ್ಲಿಟ್ಟುಕೊಂಡೇ ರಾಜ್ಯ ವಿಧಾನಮಂಡಲ ಅಂಗೀಕರಿಸಿದ ವಿಧೇಯಕವನ್ನು ಜಾರಿಗೊಳಿಸಲು ಇಂದು ನಡೆದ ಸಚಿವ ಸಂಪುಟ ಸಭೆ ನಿರ್ಧರಿಸಿದೆ.ಇದರಿಂದ ಉದ್ಭವಿಸುವ ಹಲ ಅಡೆ,ತಡೆಗಳನ್ನು ನಿವಾರಿಸಲು ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.


ಸಂಬಂಧಿತ ಟ್ಯಾಗ್ಗಳು

#Karnataka #Promotion Act #Government #Amendment


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ