ಕೊಲೆಗೈದು ಖಾಲಿಜಾಗದಲ್ಲಿ ಶವ ಎಸೆದು ಹೋದ ದುಷ್ಕರ್ಮಿಗಳು !

Kannada News

05-06-2017

ಬೆಂಗಳೂರು:- ನಗರದ ಹೊರವಲಯದ ನೆಲಮಂಗಲ ಸಮೀಪದ ಸೊಂಡೆಕೊಪ್ಪ ಬಳಿ ದುಷ್ಕರ್ಮಿಗಳು ವ್ಯಕ್ತಿಯೊಬ್ಬರನ್ನು ಕೊಲೆಗೈದು ಮೃತದೇಹವನ್ನು ಎಸೆದು ಹೋಗಿದ್ದು,  ಇಂದು ಬೆಳಿಗ್ಗೆ ಶವ ಪತ್ತೆಯಾಗಿದೆ. ಕೊಲೆಯಾಗಿರುವ ವ್ಯಕ್ತಿಯು ಸುಮಾರು 45 ವರ್ಷ ವಯಸ್ಸಿನವರಾಗಿದ್ದು ಅವರ ಹೆಸರು ವಿಳಾಸ ತಿಳಿದುಬಂದಿಲ್ಲ. ಬೇರೆಲ್ಲೂ ಕೊಲೆ ಮಾಡಿರುವ ದುಷ್ಕರ್ಮಿಗಳು ಮೃತದೇಹವನ್ನು ಸೊಂಡೆಕೊಪ್ಪದ ಖಾಲಿ ಜಾಗವೊಂದರಲ್ಲಿ ಎಸೆದು ಪರಾರಿಯಾಗಿದ್ದಾರೆ. ದೇಹದ ಮೇಲೆ ಗಾಯದ ಗುರುತುಗಳಿದ್ದು, ಮೃತದೇಹವನ್ನು ಕಂಡ ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ ಮಾದನಾಯಕನಹಳ್ಳಿ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ