ಶಾರ್ಟ್ ಸರ್ಕ್ಯೂಟ್ ನಿಂದ ಗುಜರಿ ಅಂಗಡಿ ಬೆಂಕಿಗಾಹುತಿ !

Kannada News

05-06-2017

 

 

ಬೆಂಗಳೂರು:- ಗುಜರಿ ಅಂಗಡಿಯೊಂದಕ್ಕೆ ಅಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟ ಸಂಭವಿಸಿರುವ ದುರ್ಘಟನೆ ದೊಡ್ಡಬೊಮ್ಮಸಂದ್ರದ ನಂಜಪ್ಪ ವೃತ್ತದ ಬಳಿ ಭಾನುವಾರ ಮಧ್ಯರಾತ್ರಿ ನಡೆದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ನಂಜಪ್ಪ ವೃತ್ತದ ರಷೀದ್‍ಪಾಷ ಎಂಬುವರ ಗುಜರಿ ಅಂಗಡಿಗೆ ಮಧ್ಯರಾತ್ರಿ 2ರ ವೇಳೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ತಗುಲಿದ ಬೆಂಕಿ ಕ್ಷಣಾರ್ಧದಲ್ಲಿ ಇಡೀ ಅಂಗಡಿ ಆವರಿಸಿ ದಟ್ಟ ಹೊಗೆ ಬೆಂಕಿ ಹೊರ ಬರಲಾರಂಭಿಸಿತ್ತು. ಬೆಂಕಿಯನ್ನು ನೋಡಿದ ಸ್ಥಳೀಯರು  ಕೂಡಲೇ  ಆಗ್ನಿಶಾಮಕದಳಕ್ಕೆ ಮಾಹಿತಿ ನೀಡಿದರು, ಸ್ಥಳಕ್ಕಾಗಮಿಸಿದ ಮೂರು ಆಗ್ನಿಶಾಮಕ ವಾಹನಗಳು ಮುಂಜಾನೆವರೆಗೆ ಶ್ರಮಿಸಿ ಬೆಂಕಿ ನಂದಿಸಿವೆ. ಬೆಂಕಿಯಿಂದ ಅಂಗಡಿಯಲ್ಲಿದ್ದ ಪ್ಲಾಸ್ಟಿಕ್ ಸೇರಿ ಗುಜರಿ ವಸ್ತುಗಳು ಬೆಂಕಿಗಾಹುತಿಯಾಗಿವೆ. ಅಂಗಡಿಯಲ್ಲಿ ಯಾರೂ ಇಲ್ಲದಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಪ್ರಕರಣ ದಾಖಲಿಸಿಕೊಂಡಿರುವ ವಿದ್ಯಾರಣ್ಯಪುರ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ