ಸತ್ಯಾಗ್ರಹ ನಿರತ ಅಣ್ಣಾ ಹಜಾರೆ ಅಸ್ವಸ್ಥ

 Anna Hazare is sick

02-02-2019

ಭ್ರಷ್ಟಾಚಾರ ನಿರ್ಮೂಲನೆ ಹಾಗೂ ಲೋಕಪಾಲ ಮತ್ತು ಲೋಕಾಯುಕ್ತರ ನೇಮಕಕ್ಕೆ ಆಗ್ರಹಿಸಿ ಗಾಂಧಿವಾದಿ ಅಣ್ಣಾ ಹಜಾರೆ ಆರಂಭಿಸಿರುವ ಸತ್ಯಾಗ್ರಹ ಮೂರನೇ ದಿನಕ್ಕೆ ಕಾಲಿಟ್ಟಿದೆ. ಈ ಮಧ್ಯೆ  ಉಪವಾಸ ಆರಂಭಿಸಿರೋದರಿಂದ ಅಣ್ಣಾ ಹಜಾರೆ ಅಸ್ವಸ್ಥರಾಗಿದ್ದು, ಅವರ ರಕ್ತದೊತ್ತಡ ಹಾಗೂ ದೇಹದಲ್ಲಿನ ಸಕ್ಕರೆ ಪ್ರಮಾಣದಲ್ಲಿ ಇಳಿಕೆಯಾಗಿದೆ ಎಂದು ವೈದ್ಯರು ಹೇಳಿದ್ದಾರೆ. 
ಲೋಕಪಾಲ ಮಸೂದೆ 2014 ಜನವರಿಯಲ್ಲಿ  ಸಂಸತ್‍ನಲ್ಲಿ ಅನುಮೋದನೆ ಪಡೆದು ರಾಷ್ಟ್ರಪತಿಯವರಿಂದ ಸಹಿ ಪಡೆದಿದ್ದರೂ ಲೋಕಪಾಲ ಮಸೂದೆಯನ್ನು ಜಾರಿಗೆ ತರುವಲ್ಲಿ ಎನ್‍ಡಿಎ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ  ಅಣ್ಣಾ ಹಜಾರೆ ಸತ್ಯಾಗ್ರಹ ಆರಂಭಿಸಿದ್ದಾರೆ. 

ಅಕ್ಟೋಬರ್ 2 ರಂದೇ ಸತ್ಯಾಗ್ರಹ ಆರಂಭಿಸುವುದಾಗಿ ಹೇಳಿದ್ದ ಅಣ್ಣಾ ಹಜಾರೆಯವರನ್ನು ಮಹಾರಾಷ್ಟ್ರದ  ಜಲಸಂಪನ್ಮೂಲ ಸಚಿವ ಗಿರೀಶ್ ಮಹಾಜನ್ ಯಶಸ್ವಿಯಾಗಿದ್ದರು. ಆದರೆ  ಇದೀಗ ಮತ್ತೆ ಅಣ್ಣಾ ಹಜಾರೆ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. 

ಲೋಕಪಾಲ ಮಸೂದೆ ಜಾರಿಗೆ ತರಬೇಕೆಂದು ಆಗ್ರಹಿಸಿ ಉಪವಾಸ ಆರಂಭಿಸಿರುವ ಅಣ್ಣಾ ಹಜಾರೆಯವರಿಗೆ 81 ವರ್ಷ ವಯಸ್ಸಾಗಿದೆ. ಇದೀಗ ಅವರ ಆರೋಗ್ಯ ಹದಗೆಟ್ಟಿದ್ದು, ಯಾವುದೇ ಕಾರಣಕ್ಕೂ ಸತ್ಯಾಗ್ರಹವನ್ನು ಹಿಂಪಡೆಯುವುದಿಲ್ಲ ಎಂದು ಅಣ್ಣಾ ಹಜಾರೆ ಹಟ ಹಿಡಿದು  ಕೂತಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರ ಇದಕ್ಕೆ ತಕ್ಷಣ ಸ್ಪಂದಿಸುವ ಅಗತ್ಯವಿದೆ. 
ಇನ್ನು 2011 ರಲ್ಲಿಯೂ ಲೋಕಪಾಲಮಸೂದೆಗೆ ಒಪ್ಪಿಗೆ ನೀಡುವಂತೆ ಆಗ್ರಹಿಸಿ  ಅಣ್ಣಾ ಹಜಾರೆ ಉಪವಾಸ ನಡೆಸಿದ್ದರು.

ಇದಕ್ಕೆ ದೇಶದಾದ್ಯಂತ ಅಭೂತಪೂರ್ವ ಬೆಂಬಲ ವ್ಯಕ್ತವಾಗಿತ್ತು. ಅಲ್ಲದೇ ಲೋಕಸಭಾ ಚುನಾವಣೆಯಲ್ಲಿ ಯುಪಿಎ ಮೇಲೆ ಇದರ ಪರಿಣಾಮವಾಗಿತ್ತು. ಇದೀಗ ಮತ್ತೊಮ್ಮೆ ಲೋಕಸಭಾ ಚುನಾವಣೆ ಎದುರಿನಲ್ಲಿ ಅಣ್ಣಾ ಹಜಾರೆ ಸತ್ಯಾಗ್ರಹ ಆರಂಭಿಸಿದ್ದು, ಎನ್‍ಡಿಎ ಇದಕ್ಕೆ ಹೇಗೆ ಸ್ಪಂದಿಸುತ್ತೆ ಕಾದುನೋಡಬೇಕಿದೆ. 


ಸಂಬಂಧಿತ ಟ್ಯಾಗ್ಗಳು

#Anna Hazare #Sick #Satyagraha #Nda


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


Rehab For Alcohol Abuse Drug Rehab Near Me Drug Rehab Alcohol Rehab Near Me Alcohol Rehab For Professionals http://aaa-rehab.com [url=http://aaa-rehab.com]Drug Rehab Near Me[/url]
  • JamesBesee
  • Construction, facilities