ಮರಕ್ಕೆ ನೇಣು ಬಿಗಿದುಕೊಂಡು ಅನ್ನದಾತ ಆತ್ಮಹತ್ಯೆ !

Kannada News

06-06-2017

ಮಂಡ್ಯ:- ಅನ್ನದಾತರ ಕೂಗಿಗೆ, ಅವರ ಸಮಸ್ಯೆಗಳಿಗೆ ಸಾವೊಂದೇ ಪರಿಷ್ಕಾರ ಎಂಬಂತಾಗಿದೆ, ಸದ್ಯದ ಪರಿಸ್ಥಿತಿಯಲ್ಲಿ ರೈತರು ಸಾಲಬಾಧೆ ತಾಳಲಾರದೆ ಸಾವನ್ನಪ್ಪುತ್ತಿರುವ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ರಾಜ್ಯದಲ್ಲಿ ಕಳೆದ ಕೆಲದಿನಗಳಿಂದ ರೈತರ ಆತ್ಮ ಹತ್ಯೆಗಳು ವರದಿಯಾಗುತ್ತಲೇ ಇವೆ. ಇದೀಗ ಸಾಲಬಾಧೆಯಿಂದ ನೇಣಿಗೆ ಶರಣಾಗಿರುವ ಘಟನೆ ಮದ್ದೂರು ತಾಲ್ಲೂಕಿನ ಆಬಲವಾಡಿ ಗ್ರಾಮದಲ್ಲಿ ನಡೆದಿದೆ. ಸಿದ್ದರಾಜು(50) ಮೃತ ರೈತ. ತನ್ನ ಜಮೀನಿನ ಬಳಿ ಮರಕ್ಕೆ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಒಂದೂವರೆ ಎಕರೆ ಜಮೀನಿನಲ್ಲಿ ನೀರಿಗಾಗಿ ಕೊರೆಸಿದ್ದ ಬೋರ್ ವೆಲ್ ಕೂಡ ವಿಫಲವಾಗಿತ್ತು. ಬ್ಯಾಂಕ್  ಹಾಗು ಇತರೆಡೆ ಸೇರಿ ಸುಮಾರು ಐದು ಲಕ್ಷ ಸಾಲ ಮಾಡಿದ್ದರು. ಸಾಲ ಮರುಪಾವತಿ ಮಾಡಲಾಗದೆ ಮನನೊಂದು ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ. ಕೊಪ್ಪ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ