ನಾಳೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ

Tomorrow JDS Legislative Party Meeting

07-02-2019

ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯನ್ನು ನಾಳೆ ಬೆಳಗ್ಗೆ ಕರೆದಿದ್ದು, ಎಲ್ಲಾ ಶಾಸಕರಿಗೂ ವಿಪ್ ನೀಡಲಾಗಿದೆ. ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸೌಧದಲ್ಲಿ ನಾಳೆ ಬೆಳಗ್ಗೆ 9.30ಕ್ಕೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯನ್ನು ನಡೆಸಲಿದ್ದಾರೆ.

ಈ ಸಭೆಗೆ ಎಲ್ಲಾ ಶಾಸಕರು ತಪ್ಪದೇ ಹಾಜರಾಗುವಂತೆ ವಿಪ್‍ನಲ್ಲಿ ತಿಳಿಸಲಾಗಿದ್ದು, ಗೈರು ಹಾಜರಾದವರಿಗೆ ಪಕ್ಷಾಂತರ ನಿಷೇಧ ಕಾಯ್ದೆಯಡಿ ಕ್ರಮ ಜರುಗಿಸಲಾಗುವುದು ಎಂಬ ಎಚ್ಚರಿಕೆಯನ್ನು ನೀಡಲಾಗಿದೆ.

ಶಾಸಕ ನಾರಾಯಣಗೌಡಗೆ ಆರೋಗ್ಯ ಸಮಸ್ಯೆ : ಆರೋಗ್ಯ ಸಮಸ್ಯೆಯಿಂದಾಗಿ ನಮ್ಮ ಪಕ್ಷದ ಶಾಸಕ ನಾರಾಯಣಗೌಡ ಅವರು ಅಧಿವೇಶನಕ್ಕೆ ಬರಲಾಗಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಹೇಳಿದರು.

ಈ ಸಂಜೆಯೊಂದಿಗೆ ಮಾತನಾಡಿದ ಅವರು, ನಾರಾಯಣಗೌಡರು ಸದನಕ್ಕೆ ಗೈರು ಹಾಜರಾಗಿರುವ ಬಗ್ಗೆ ಕೇಳಿ ಬಂದಿರುವ ಊಹಾಪೋಹಗಳು ಆಧಾರ ರಹಿತ. ನಮ್ಮ ಪಕ್ಷದಲ್ಲಿ ಯಾವುದೇ ರೀತಿಸಮಸ್ಯೆ ಇಲ್ಲ ಎಂದರು.ನಾರಾಯಣಗೌಡರು ಅಧಿವೇಶನಕ್ಕೆ ಬಂದೇ ಬರುತ್ತಾರೆ. ಈ ಬಗ್ಗೆ ಅಪನಂಬಿಕೆ ಬೇಡ ಎಂದು ಪುನರುಚ್ಚರಿಸಿದರು.

ಬೆಂಗಳೂರು,

ಜೆಡಿಎಸ್ ಶಾಸಕ ನಾರಾಯಣಗೌಡ ಅವರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಕೈ ಕೊಟ್ಟು ಮುಂಬೈಗೆ ಹಾರಿದ್ದಾರೆ. ನಾವೇನು ಆಪರೇಷನ್ ಕಮಲ ಮಾಡುವುದಿಲ್ಲ. ಅವರವರೇ ಆಪರೇಷನ್ ಮಾಡಿಕೊಳ್ಳುತ್ತಾರೆ ಎಂದು ಬಿಜೆಪಿ ಶಾಸಕ ಶ್ರೀರಾಮುಲು ಬಾಂಬ್ ಸಿಡಿಸಿದ್ದಾರೆ.

ವಿಧಾನಸೌಧದಲ್ಲಿಂದು ಮಾತನಾಡಿದ ಅವರು, ಆಪರೇಷನ್ ಕಮಲ ಮಾಡುತ್ತಿದ್ದಾರೆ ಎಂದು ಆಡಳಿತ ಪಕ್ಷದ ನಾಯಕರು ಬೊಬ್ಬೆ ಹೊಡೆಯುತ್ತಿದ್ದಾರೆ. ಆದರೆ ನಾವಂತೂ ಆಪರೇಷನ್ ಮಾಡೋಲ್ಲ. ಅವರೇ ಆಪರೇಷನ್ ಮಾಡಿಕೊಳ್ಳುತ್ತಾರೆ ಎಂದು ಹೇಳಿದರು.

ಆಡಳಿತ ಪಕ್ಷದ ಶಾಸಕರುಗಳೇ ಬಹಿರಂಗವಾಗಿ ತಮ್ಮ ಸರ್ಕಾರದ ವಿರುದ್ಧ ಹೇಳಿಕೆಗಳನ್ನು ನೀಡಿದ್ದಾರೆ. ಇನ್ನಷ್ಟು ಶಾಸಕರು ಕಾಂಗ್ರೆಸ್‍ನಿಂದ ಹೊರಬರುವ ಸಾಧ್ಯತೆ ಇದೆ.

ಅಲ್ಲದೆ ವಿಪ್ ಜಾರಿ ಮಾಡಿದ್ದರೂ ಸಹ ಸಂಖ್ಯಾಬಲದ ಕೊರತೆ ಇರುವುದರಿಂದ ಮುಖ್ಯಮಂತ್ರಿ ಕುಮಾರಸ್ವಾಮಿಯವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.

ಸುಖಾಸುಮ್ಮನೆ ನಮ್ಮ ಮೇಲೆ ಆರೋಪ ಮಾಡುವ ಕಾಂಗ್ರೆಸ್-ಜೆಡಿಎಸ್ ನಾಯಕರು ತಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಆದರೆ ನಮ್ಮ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದರು.


ಸಂಬಂಧಿತ ಟ್ಯಾಗ್ಗಳು

#Tomorrow #Legislative Party #Jds #Meeting


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ