ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಬಿಎಸ್‍ವೈ ವಿರುದ್ಧ ಶಾಸಕರ ಕಿಡ್ನಾಪ್ ಕೇಸ್ 

 MLA kidnap case against BSY in Vidhanasoudha police station

08-02-2019

ಆಫರೇಶನ್ ಕಮಲ ಹಾಗೂ ರಾಜ್ಯ ರಾಜಕೀಯ ಹೈಡ್ರಾಮಾಗಳಿಗೆ ಇದೀಗ ಮತ್ತೊಂದು ಅಂಕ ಸೇರ್ಪಡೆಯಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್‍ವೈ ಹಾಗೂ ಶಾಸಕ ಅಶ್ವತ್ಥ ನಾರಾಯಣ ವಿರುದ್ಧ ಕಿಡ್ನಾಪ್ ಪ್ರಕರಣ ದಾಖಲಾಗಿದೆ. ಬೆಂಗಳೂರು ಮೂಲದ ವಕೀಲರೊಬ್ಬರು ಬಿಎಸ್‍ವೈ ಹಾಗೂ ಅಶ್ವತ್ಥ ನಾರಾಯಣ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಗೆ ಶಾಸಕರ ಅಪಹರಣ ಮಾಡಿದ್ದಾರೆ ಎಂದು ದೂರು ನೀಡಿದ್ದಾರೆ. 

ಬಜೆಟ್ ಅಧಿವೇಶನಕ್ಕೆ ಹಾಜರಾಗಿ ಜನರ ಸಮಸ್ಯೆಗಳ ಬಗ್ಗೆ ಮಾತನಾಡುವ ಜವಾಬ್ದಾರಿ ಹೊಂದಿರುವ ಶಾಸಕರನ್ನು ಬಿಎಸ್‍ವೈ ಅವರ ಬೆಂಬಲಿಗರು ಹಾಗೂ ಶಾಸಕ ಅಶ್ವತ್ಥ ನಾರಾಯಣ ಬಲವಂತವಾಗಿ ಕೂಡಿಹಾಕಿದ್ದಾರೆ. ಇದರಿಂದ ಶಾಸಕರಿಗೆ ಅಧಿವೇಶನಕ್ಕೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಇದು ಕಾನೂನಿನೆ ವಿರುದ್ಧವಾದದ್ದಾಗಿದೆ. ಹೀಗಾಗಿ ಬಿಎಸ್‍ವೈ, ಅಶ್ವತ್ಥ ನಾರಾಯಣ ವಿರುದ್ಧ ಕ್ರಮಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೇಖಿಸಲಾಗಿದೆ. 

ವಕೀಲ ಆರ್.ಎಲ್.ಎನ್ ಮೂರ್ತಿ ಹೀಗೆ ದೂರು ದಾಖಲಿಸಿದ್ದು, ಶಾಸಕರ ಅಪಹರಣ ಬಿಜೆಪಿ, ಬಿಎಸ್‍ವೈ ಹಾಗೂ ಅಶ್ವತ್ಥನಾರಾಯಣ ರಾಜ್ಯಕ್ಕೆ ಮಾಡಿದ ಅವಮಾನ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿರುವ ದ್ರೋಹ. ಹೀಗಾಗಿ ಇಬ್ಬರು ರಾಜಕೀಯ ಮುಖಂಡರ ವಿರುದ್ಧ ಕ್ರಮಕೈಗೊಳ್ಳುವಂತೆ ಅವರು ದೂರಿನಲ್ಲಿ ಮನವಿ ಮಾಡಿದ್ದಾರೆ. 

ದೂರಿನಲ್ಲಿ ಮಾಜಿಮುಖ್ಯಮಂತ್ರಿ ಬಿಎಸ್‍ವೈ ಪುತ್ರ ಹಾಗೂ ಸಂಸದ ವಿಜಯೇಂದ್ರ ಹೆಸರನ್ನು ಉಲ್ಲೇಖಿಸಲಾಗಿದೆ. ಈ ದೂರು ರಾಜಕೀಯ ಪ್ರೇರಿತವಾಗಿದೆ. ನಾವು ಯಾವುದೆ ಪಕ್ಷದ ಶಾಸಕರನ್ನು ಎಲ್ಲಿಯೂ ಕೂಡಿಹಾಕಿಲ್ಲ ಎಂದು ಬಿಜೆಪಿ ಸ್ಪಷ್ಟನೆ ನೀಡಿದೆ. ಒಟ್ಟಿನಲ್ಲಿ ಕರ್ನಾಟಕದ ರಾಜಕೀಯ ಹೈಡ್ರಾಮಾ ರಂಗೇರ ತೊಡಗಿದ್ದು, ಯಾವಾಗ ಅಂತ್ಯ ಕಾಣುತ್ತೆ ಅನ್ನೋದನ್ನು ಕಾದು ನೋಡಬೇಕಿದೆ. 


ಸಂಬಂಧಿತ ಟ್ಯಾಗ್ಗಳು

#VidhanSoudha #Bsy #Complent #Aswath Narayan


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ