ಇಲ್ಲಿದೆ ನೋಡಿ ಕುಮಾರಸ್ವಾಮಿ ಬಜೆಟ್ ವಿವರ

Here Kumaraswamy budget details

08-02-2019

ಕೃಷಿಯ ಜೊತೆಗೆ ರಾಜಧಾನಿ ಬೆಂಗಳೂರು ಅಭಿವೃದ್ಧಿಗೂ ಮುಂದಾಗಿರುವ ಸಿಎಂ ಕುಮಾರಸ್ವಾಮಿ, ಮುಖ್ಯಮಂತ್ರಿಗಳ ನವ ಬೆಂಗಳೂರು ನಿರ್ಮಾಣ ಯೋಜನೆಯ ಮೂಲಕ `ಬ್ರಾಂಡ್ ಬೆಂಗಳೂರು'ನ್ನು ವಿಶ್ವದರ್ಜೆಯಲ್ಲಿ ಏರಿಸುವ ಭರವಸೆ ನೀಡಿದ್ದಾರೆ.

ಒಟ್ಟು 8,015 ಕೋಟಿ ರುಪಾಯಿ ವೆಚ್ಚದಲ್ಲಿ ನಗರದ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ಮಾಡಲಾಗಿದೆ.ಇದಕ್ಕಾಗಿ ಗ್ರೇಡ್ ಸಪರೇಟರ್ ರಸ್ತೆಗಳ ನಿರ್ಮಾಣ, ಉತ್ತಮ ಗುಣಮಟ್ಟದ ಪಾದಾಚಾರಿ ಮಾರ್ಗ ನಿರ್ಮಾಣಕ್ಕೆ ಅನುದಾನ ಮೀಸಲಿಡಲಾಗಿದೆ. ಅಲ್ಲದೆ 2020ರ ವೇಳೆಗೆ ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳ ಸಂಖ್ಯೆ ಹೆಚ್ಚಿಸಲು ಅನುದಾನ ಮೀಸಲಿಡಲಾಗಿದೆ.

ಬೀದಿ ಬದಿ ವ್ಯಾಪಾರಿಗಳಿಗೆ ನೆರವಾಗಲು "ಬಡವರ ಬಂಧು" ಯೋಜನೆ ಜಾರಿಗೆ ಅನುದಾನ ಮೀಸಲಿಡಲಾಗಿದೆ. ಈ ಯೋಜನೆಯಡಿ 7.68 ಕೋಟಿ ರೂಪಾಯಿ ಸಾಲ ಸೌಲಭ್ಯ ನೀಡಲು ಅನುದಾನ ಮೀಸಲಿಡಲಾಗಿದೆ. 

ಇನ್ನು ಹೊಸ 102 ಕಿ.ಮೀ. ಉದ್ದದ ಮೆಟ್ರೋ ಮಾರ್ಗಗಳಿಗೆ ಚಾಲನೆ ಹಾಗೂ ಎರಡನೇ ಹಂತದ ಮೆಟ್ರೋ ಮಾರ್ಗಗಳ ನಿರ್ಮಾಣ ಯೋಜನೆಯ ಚಾಲನೆಗೆ ಅನುದಾನ ಮೀಸಲಿಡಲಾಗಿದೆ.

ಕೇಂದ್ರದ ಅನುದಾನಗಳ ಸಮನ್ವಯದೊಂದಿಗೆ ಹೆದ್ದಾರಿಗಳ ಅಭಿವೃದ್ಧಿಗೂ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಕುಮಾರಸ್ವಾಮಿ ಘೋಷಿಸಿದ್ದಾರೆ.
ಸಿಎಂ ಹೆಚ್.ಡಿ ಕುಮಾರಸ್ವಾಮಿ ಇಂದು ಮಂಡಿಸಿದ ಬಜೆಟ್‍ನಲ್ಲಿ ಹೊಸದಾಗಿ ನಾಲ್ಕು ತಾಲ್ಲೂಕುಗಳನ್ನ ರಚನೆ ಮಾಡುವ ಬಗ್ಗೆ ಘೋಷಣೆ ಮಾಡಿದ್ದಾರೆ.

ವಿಧಾನಸಭೆಯಲ್ಲಿ ಸಮ್ಮಿಶ್ರ ಸರ್ಕಾರದ ಬಜೆಟ್ ಮಂಡನೆ ಮಾಡಿದ ಸಿಎಂ ಹೆಚ್.ಡಿ ಕುಮಾರಸ್ವಾಮಿ, ರಾಮನಗರದ ಹಾರೋಹಳ್ಳಿ, ಚಿಕ್ಕಬಳ್ಳಾಪುರದ ಚೇಳೂರು, ಬಾಗಲಕೋಟೆ ಜಿಲ್ಲೆಯ ತೇರದಾಳ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕಳಸ ಹೊಸ ತಾಲೂಕುಗಳನ್ನಾಗಿ ಘೋಷಣೆ ಮಾಡಿದ್ದಾರೆ.

ಇನ್ನು ಬಜೆಟ್‍ನಲ್ಲಿ  ಬೆಂಗಳೂರು ಏರ್ ಪೋರ್ಟ್‍ಗೆ ಹೊಸ ಟರ್ಮಿನಲ್. ಹೊಸ ಟರ್ಮಿನಲ್ ಕಟ್ಟಡದ ಅಭಿವೃದ್ಧಿಗೆ 32 ಕೋಟಿ ರೂಪಾಯಿ ಅನುದಾನ  ನೀಡಲಾಗುವುದು . ಹಾಸನದಲ್ಲಿ ನೂತನ ವಿಮಾನ ನಿಲ್ದಾಣ ನಿರ್ಮಾಣ ಘೋಷಣೆ. ಇತ್ತೀಚೆಗೆ ಲಿಂಗೈಕ್ಯರಾದ ಸಿದ್ಧಗಂಗಾ ಶ್ರೀಗಳ ಹುಟ್ಟೂರು ವಿರಾಪುರದಲ್ಲಿ ಪಾರಂಪರಿಕ ಕೇಂದ್ರ ಸ್ಥಾಪನೆ ಮಾಡುವುದಾಗಿ ತಿಳಿಸಿದ್ದಾರೆ. ಇನ್ನು  ಹಾಸನದಲ್ಲಿ ಹೊಸ ತಾಂತ್ರಿಕ ವಿಶ್ವವಿದ್ಯಾಲಯ ಸ್ಥಾಪನೆ ಬಗ್ಗೆ ಘೋಷಣೆ ಮಾಡಿದ್ದಾರೆ.
ಸಂಧ್ಯಾಸುರಕ್ಷಾ ಯೋಜನೆಯ ಪಿಂಚಿಣಿ ಹೆಚ್ಚಳ ಮಾಡಲಾಗುವುದು. ರೂ 600ರೂಪಾಯಿಯಿಂದ 1000 ರೂಗಳಿಗೆ ಏರಿಕೆ ಮಾಡಲಾಗುತ್ತದೆ ಎಂದು ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಬಜೆಟ್ ಮಂಡಿಸುತ್ತಿರುವ ಸಿಎಂ ಹೆಚ್.ಡಿ ಕುಮಾರಸ್ವಾಂಮಿ, ಮಾತೃಶ್ರೀ ಯೋಜನೆ ಮೂಲಕ ನೆರವು ನೀಡಲಾಗುತ್ತದೆ. ವೃದ್ಧರ ಮಾಸಾಶನದಲ್ಲಿ ಏರಿಕೆ.600ರಿಂದ 1000 ರೂ.ಗಳಿಗೆ ಮಾಸಾಶನ ಹೆಚ್ಚಳ ಮಾಡಲಾಗುತ್ತದೆ.

ಮಾತೃಶ್ರೀ ಯೋಜನೆಯಡಿ ಗರ್ಭಿಣಿಯರಿಗೆ ಮಾಸಿಕ ಆರು ಸಾವಿರ ರೂಪಾಯಿ ನೀಡಲಾಗುತ್ತದೆ. ಆಯುಷ್ಮಾನ್ ಭವ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ 1614 ಪ್ರೊಸಿಜರ್ ಗಳಿಗೆ ನಗದು ರಹಿತ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯ ಕರ್ನಾಟಕ ಯೋಜನೆ, ಆಯುಷ್ಮಾನ್ ಜೊತೆ ವಿಲೀನಗೊಳಿಸಲಾಗಿದೆ ಎಂದು ತಿಳಿಸಿದರು.

ಒಂದೇ ಸೂರಿನಡಿ ಪ್ರಾಥಮಿಕ ಪ್ರೌಢ ಶಿಕ್ಷಣ,ಶಾಲೆಗಳ ಅಭಿವೃದ್ಧಿಗೆ 1200 ಕೋಟಿ ನೀಡಲಾಗುತ್ತದೆ. ಎಲ್ಲರಿಗೂ ಗುಣಮಟ್ಟದ ಶಿಕ್ಷಣ ನೀಡುವುದು ನಮ್ಮ ಗುರಿಯಾಗಿದೆ. ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಯೋಜನೆ. 176 ಕರ್ನಾಟಕ ಪಬ್ಲಿಕ್ ಸ್ಕೂಲ್ ಸ್ಥಾಪನೆ. ಮಕ್ಕಳ ಸುರಕ್ಷತೆಗೆ ಹೆಚ್ಚಿನ ಒತ್ತು. 3,389 ಪ್ರಾಥಮಿಕ ಶಿಕ್ಷಕರ ನೇಮಕ ಮಾಡಲಾಗಿದೆ  ಎಂದು ಮಾಹಿತಿ ನೀಡಿದರು.

ಹಾಗೆಯೇ 415 ಕೋಟಿ ವೆಚ್ಚದಲ್ಲಿ ಒಳಚರಂಡಿಗೆ ಆದ್ಯತೆ  ನೀಡಲಾಗುತ್ತಿದೆ, ಗ್ರಾಮೀಣ ಉದ್ಯೋಗ ಖಾತರಿಯಡಿ 10 ಕೋಟಿ ಉದ್ಯೋಗ ಸೃಷ್ಟಿ ಮಾಡುವ ಗುರಿಯನ್ನ ಸಮ್ಮಿಶ್ರ ಸರ್ಕಾರ 
ಬೆಂಗಳೂರು: ಪೊಲೀಸ್ ಕಾಲೋನಿಗಳಲ್ಲಿ ಮೂಲಸೌಲಭ್ಯ ಒದಗಿಸಲು 20 ಕೊಟಿ ಅನುದಾನ ನೀಡುವುದರ ಜೊತೆಗೆ ಪೊಲೀಸ್ ಇಲಾಖೆಗೆ ಹಲವಾರು ಕೊಡುಗೆಗಳನ್ನು ಈ ಬಜೆಟ್‍ನಲ್ಲಿ ನೀಡಲಾಗಿದೆ.

ನಗರದಲ್ಲಿ ಹೊಸ ಸೈಬರ್ ಎಕಾನಾಮಿಕ್ ನಾರ್ಕೋಟಿಕ್ ವಿಂಗ್ ಪ್ರಾರಂಭಿಸಲು 4 ಕೋಟಿ ಅನುದಾನ ನೀಡಲಾಗಿದೆ.
ಅಪರಾಧ ನಿಯತ್ರಂಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಡ್ರೋಣ್ ಕಣ್ಗಾವಲು ವ್ಯವಸ್ಥೆಗೆ  5 ಕೋಟಿ ಅನುದಾನ ನೀಡಲಾಗಿದೆ.
ತಲಾ 100 ಕೋಟಿ ರೂ.ಗಳ ಯೋಜನಾ ವೆಚ್ಚದಲ್ಲಿ  ವಿಜಯಪುರ ಮತ್ತು ಬೀದರ್‍ಗಳಲ್ಲಿ ತಲಾ 100 ಬಂಧಿ ಸಾಮಥ್ರ್ಯದ ಪ್ರತ್ಯೇಕ ವಿಶಿಷ್ಟ ಕೇಂದ್ರ ಕಾರಾಗೃಹ  ಹಾಗೂ ಅರಸೀಕೆರೆಯಲ್ಲಿ 200 ಬಂಧಿ ಸಾಮಥ್ರ್ಯವುಳ್ಳ ಉಪಕಾರಾಗೃಹ ನಿರ್ಮಾಣಕ್ಕೆ 30 ಕೋಟಿ ರೂ. ಅನುದಾನ ನೀಡಲಾಗಿದೆ.
ರಾಜ್ಯದಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ತುರ್ತು ಪ್ರತಿಕ್ರಿಯೆ ಬೆಂಬಲ ವ್ಯವಸ್ಥೆ ಯೋಜನೆ ಅನುಷ್ಠಾನಕ್ಕೆ ಸರ್ಕಾರ ಮುಂದಾಗಿದೆ. ಅಗ್ನಿ ಶಾಮಕ ಇಲಾಖೆಯಿಂದ ಗಗನ ಚುಂಬಿ ಕಟ್ಟಡಗಳ ಬೆಂಕಿ ಅವಘಡ ತಡೆಯಲು 90 ಮೀಟರ್ ಎತ್ತರ ತಲುಪಲು ಏರಿಯಲ್ ಲ್ಯಾಡರ್ ಫ್ಲಾಟ್ ಫಾರ್ಮ್ ವಾಹನ ಖರೀದಿಸಲು ಅನುದಾನ ನೀಡಲಾಗಿದೆ.


ಸಂಬಂಧಿತ ಟ್ಯಾಗ್ಗಳು

#Karnataka #Kumarswamy #Budget #2019


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ