ಸಿಎಂ ನಿವಾಸದ ಮುಂದೆ ಗೋ ಪೂಜೆ ಎಚ್ಚರಿಕೆ ?  ಪೊಲೀಸರ ಬಿಗಿಭದ್ರತೆ !

Kannada News

06-06-2017

ಮೈಸೂರು:- ವಧೆಗಾಗಿ ಗೋವುಗಳನ್ನು ಮಾರಾಟ ಮಾಡುವುದನ್ನು ನಿಷೇಧಿಸಿ ಕೇಂದ್ರ ಸರ್ಕಾರ ಹೊರಡಿಸಿರುವ ಆದೇಶವನ್ನು ರಾಜ್ಯದಲ್ಲೂ ಅನುಷ್ಠಾನಗೊಳಿಸಬೇಕೆಂದು ಆಗ್ರಹಿಸಿ ಅಖಂಡ ಭಾರತ ಸೇವಾ ಸೇನಾ ಸಂಘಟನೆಯಿಂದ ಮೈಸೂರಿನಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸದ ಎದುರಿನಲ್ಲಿಂದು ಗೋ ಪೂಜೆ ಮಾಡುವುದಾಗಿ ಹೇಳಿರುವ ಹಿನ್ನೆಲೆ. ಮೈಸೂರಿನಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸದ ಬಳಿ ಭಾರಿ ಪೊಲೀಸ್ ಬಿಗಿಭದ್ರತೆ ಮಾಡಲಾಗಿದೆ. ಸಿ.ಎಂ ಸಿದ್ದರಾಮಯ್ಯ ನಿವಾಸವನ್ನು ಸಂಪರ್ಕಿಸುವ ರಸ್ತೆಗಳಲ್ಲಿ ವಾಹನಗಳ ಸಂಚಾರಕ್ಕೆ ಪೊಲೀಸರು ನಿರ್ಭಂದ ಹೇರಿದ್ದಾರೆ. ರಸ್ತೆಗಳಿಗೆ ಅಡ್ಡಲಾಗಿ ಬ್ಯಾರಿಕೇಡ್ ಗಳನ್ನು ಅಳವಡಿಸಲಾಗಿದ್ದು, ಪೊಲೀಸರ ದಿಢೀರ್ ನಿರ್ಧಾರದಿಂದಾಗಿ ವಾಹನಗಳ ಸವಾರರು  ಪರದಾಡುವಂತಾಗಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ