ಹುತಾತ್ಮ ಯೋಧ ಗುರು ಕುಟುಂಬಕ್ಕೆ ಇನ್ಪೋಸಿಸ್ ನೆರವು

 Infosys Help the Martyr

18-02-2019

ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರು ನಡೆಸಿದ ಆತ್ಮಹತ್ಯಾ ಬಾಂಬ್ ದಾಳಿಗೆ ಬಲಿಯಾದ ಯೋಧರ ಕುಟುಂಬಕ್ಕೆ ಇನ್ಫೋಸಿಸ್ ಫೌಂಡೇಶನ್ ತಲಾ 10 ಲಕ್ಷ ರೂ. ಸಹಾಯಧನ ನೀಡುವುದಾಗಿ ಪ್ರತಿಷ್ಠಾನದ ಮುಖ್ಯಸ್ಥೆ ಸುಧಾಮೂರ್ತಿ ತಿಳಿಸಿದ್ದಾರೆ.

ದೇಶಕ್ಕಾಗಿ ಯೋಧರು ಬಲಿಯಾಗಿದ್ದಾರೆ. ಪತ್ರಿಕೆಯಲ್ಲಿ ಈ ಭಯಾನಕ ಘಟನೆ ಕುರಿತ ಸುದ್ದಿ ಓದಿದ ದಿನವೇ ಆರ್ಥಿಕ ಸಹಾಯ ನೀಡಬೇಕು ಎಂದು ಭಾವಿಸಿದ್ದೆ. ಹಣ ಮುಖ್ಯವಲ್ಲ, ದಾಳಿಯಲ್ಲಿ ಬಲಿಯಾಗಿರುವ ಯೋಧರ ಪ್ರಾಣಹಾನಿಯಾಗಿದೆ. ಇದು ತುಂಬಾ ನೋವಿನ ಸಂಗತಿ. ಈ ಹಿನ್ನೆಲೆಯಲ್ಲಿ ನಮ್ಮ ಸಂಸ್ಥೆಯ ವತಿಯಿಂದ ಹುತಾತ್ಮ ಯೋಧರ ಕುಟುಂಬಕ್ಕೆ ಆರ್ಥಿಕ ನೆರವು ನೀಡಲು ನಿರ್ಧರಿಸಿರುವುದಾಗಿ ತಿಳಿಸಿದರು.

'ಮಂಡ್ಯದ ಯೋಧ ಗುರು ಹುಟ್ಟೂರಿಗೆ ಹೋಗಿ ಕುಟುಂಬಸ್ಥರಿಗೆ ಸಾಂತ್ವನ ಹೇಳುತ್ತೇನೆ. ಗುರು ಪತ್ನಿ ಕಲಾವತಿ ಮನೆಗೆ ಮಾರ್ಚ್ 15 ರ ನಂತರ ತೆರಳುತ್ತೇನೆ ಎಂದರು.

ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹುತಾತ್ಮ ಯೋಧ ಗುರು ಅವರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಘೋಷಿಸಿರುವುದರ ಜತೆಗೆ ಗುರು ಅವರ ಪತ್ನಿ ಕಲಾವತಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ಭರವಸೆ ಕೊಟ್ಟಿದ್ದಾರೆ. ರಿಲಯನ್ಸ್ ಫೌಂಡೇಶನ್ ಸಂಸ್ಥೆಯು ಹುತಾತ್ಮ ಯೋಧರ ಮಕ್ಕಳಿಗೆ ಶಿಕ್ಷಣ ನೀಡುವ ಹಾಗೂ ಕುಟುಂಬಗಳ ಸಂಪೂರ್ಣ ಜವಾಬ್ದಾರಿಯನ್ನು ಹೊತ್ತುಕೊಂಡಿದೆ.


ಸಂಬಂಧಿತ ಟ್ಯಾಗ್ಗಳು

#Guru #infosys #Mandya #Help


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ