ಪಾಕ್ ಜೊತೆ ಕ್ರೀಡಾಸಂಬಂಧವೂ ಸ್ಥಗಿತ

 No Sports relations with Pakistan

19-02-2019

ಭಾರತದ ಯೋಧರನ್ನು ಬಲಿ ಪಡೆದ ಪುಲ್ವಾಮಾ ದಾಳಿ ಬಳಿಕ ಭಾರತ ಮತ್ತು ಪಾಕ್ ನಡುವೆ ಎಲ್ಲ ರೀತಿಯ ಸಂಬಂಧಗಳು ಮುರಿದು ಬೀಳಲಾರಂಭಿಸಿದ್ದು,ಇದೀಗ ಪಾಕ್ ಭಯೋತ್ಪಾದನೆ ನಿಲ್ಲಿಸುವರೆಗೂ ಯಾವುದೆ ಕ್ರೀಡಾ ಚಟುವಟಿಕೆ ಸಾಧ್ಯವಿಲ್ಲ ಎಂದು ಭಾರತ ಹೇಳಿದೆ. 


ಪಾಕಿಸ್ತಾನ ಭಯೋತ್ಪಾದನೆ ನಿಲ್ಲಿಸಿ ಶಾಂತಿ ಕಾಪಾಡಿಕೊಳ್ಳುವವರೆಗೂ ಅವರೊಂದಿಗೆ ಯಾವುದೆ ಕ್ರೀಡಾ ಚಟುವಟಿಕೆ ಅಥವಾ ಸಂಬಂಧವಿಲ್ಲ ಎಂದು ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ನ ಮುಖ್ಯಸ್ಥ ರಾಜೀವ್ ಶುಕ್ಲಾ ಹೇಳಿದ್ದಾರೆ. 
 ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭಯೋತ್ಪಾದಕ ದಾಳಿಯಲ್ಲಿ 40 ಭಾರತೀಯರು ಯೋಧರು ಹುತಾತ್ಮರಾದ ಹಿನ್ನೆಲೆಯಲ್ಲಿ ಭಾರತ ಪಾಕಿಸ್ತಾನದ ಜೊತೆ ಎಲ್ಲ ರೀತಿಯ ಸಂಬಂಧಗಳ್ನು ಕಡಿದುಕೊಳ್ಳಲು ಮುಂದಾಗಿದೆ. ಈಗಾಗಲೇ ಪಾಕ್ ನಟರಿಗೆ ಭಾರತದಲ್ಲಿ ನಿಷೇಧ ಹೇರಲಾಗಿದ್ದು, ಇದೀಗ ಕ್ರೀಡಾ ಒಪ್ಪಂದವನ್ನು ಕಡಿದುಕೊಳ್ಳಲು ನಿರ್ಧರಿಸಲಾಗಿದೆ.

 
ಈ ಬಗ್ಗೆ ಮಾತನಾಡಿದ ಐಪಿಎಲ್ ಮುಖ್ಯಸ್ಥ ರಾಜೀವ್ ಶುಕ್ಲಾ, ಕ್ರೀಡೆ ಮತ್ತು ರಾಜಕಾರಣವನ್ನು ಮಿಶ್ರಣ ಮಾಡಬಾರದು ಎಂದು ನಾನು ಬಯಸುತ್ತೇನೆ. ಆದರೆ ಪಾಕಿಸ್ತಾನವೂ ಭಾರತದೊಂದಿಗಿನ ಕ್ರಿಕೆಟ್ ಸಂಬಂಧಗಳನ್ನು ಪುನರಾರಂಭಿಸುವ  ಆಲೋಚನೆ ಮಾಡುವ ಮೊದಲು ಭಯೋತ್ಪಾದನೆ ಹಾಗೂ ಭಯೋತ್ಪಾದಕರಿಗೆ ನೆರವು ನೀಡುವುದನ್ನು ನಿಲ್ಲಿಸಬೇಕು ಎಂದಿದ್ದಾರೆ.


2013 ರಿಂದ ಇಲ್ಲಿಯವರೆಗೂ ಪಾಕಿಸ್ತಾನ ಮತ್ತು ಭಾರತ ನಡುವೆ ಯಾವುದೇ ದ್ವಿಪಕ್ಷೀಯ ಕ್ರಿಕೆಟ್ ಸರಣಿಗಳು ನಡೆದಿಲ್ಲ. ಈ ಹಿಂದಿನ ಭಯೋತ್ಪಾದನಾ ದಾಳಿಗಳ ಬಳಿಕವೇ ಭದ್ರತಾದೃಷ್ಟಿಯಿಂದ ಎರಡು ರಾಷ್ಟ್ರಗಳ ನಡುವಿನ ಪಂದ್ಯಗಳನ್ನು ರದ್ದು ಮಾಡಲಾಗಿತ್ತು. ಇದೀಗ ಮತ್ತೆ ಯಾವುದೇ ಕ್ರೀಡಾಸಂಬಂಧ ಬೆಳೆಸದಿರಲು ತೀರ್ಮಾನಿಸಲಾಗಿದೆ. 


ಸಂಬಂಧಿತ ಟ್ಯಾಗ್ಗಳು

#No Relations #India #Sports #Pakistan


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ