ಪ್ರತಿಭಟನಾ ನಿರತ ರೈತರ ಮೇಲೆ ಗುಂಡು ಹಾರಿಸಿದ ಪೊಲೀಸರು !

Kannada News

06-06-2017

ಭೋಪಾಲ್ :- ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮಧ್ಯ ಪ್ರದೇಶದ ಭೋಪಾಲ್ ನಲ್ಲಿ ರೈತರು ನಡೆಸುತ್ತಿದ್ದ ಪ್ರತಿಭಟನೆ ವೇಳೆ ಇಬ್ಬರು ರೈತರು ಮೃತಪಟ್ಟಿದ್ದಾರೆ. ಪ್ರತಿಭಟನಾಕಾರರ ಮೇಲೆ ಪೊಲೀಸರು ಗುಂಡು ಹಾರಿಸಿದ ಪರಿಣಾಮ ಇಬ್ಬರು ರೈತರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಳೆದ ಆರು ದಿನಗಳಿಂಧ ರೈತರು ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನಗೆ ಸರ್ಕಾರ ಸ್ಪಂದಿಸದ ಕಾರಣ ಕಿಸಾನ್ ಮಸ್ದೂರ್ ಸಂಘ ಬುಧವಾರ ರಾಜ್ಯಾದ್ಯಂತ ಬಂದ್ ಗೆ ಕರೆ ನೀಡಿತ್ತು. ಮುಂಜಾಗ್ರತಾ ಕ್ರಮವಾಗಿ ಹಲವು ಪ್ರದೇಶಗಳಲ್ಲಿ ಅಂತರ್ಜಾಲದ ಸೇವೆಯನ್ನೂ ಸ್ಥಗಿತಗೊಳಸಲಾಗಿತ್ತು. ರೈತರ ಪ್ರತಿಭಟನೆ ವೇಳೆ ಸರ್ಕಾದದ ವಿರುದ್ಧ ಘೋಷಣೆಗಳನ್ಜು ಕೂಗತ್ತಿದ್ದರು, ಪ್ರತಿಭಟನೆ ತೀವ್ರವಾಗುತ್ತಿದ್ದಂತೆ ಪೊಲೀಸರು ಕ್ರಮ ಕೈಗೊಳ್ಳಲು ಮುಂದಾದರು ಇದೇ ಸಮಯದಲ್ಲಿ ಗುಂಡು ಹಾರಿಸಿದ್ದು ರೈತರಿಗೆ ಗುಂಡು ತಗುಲಿ ಮೃತಪಟ್ಟಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ