ಮೋದಿ ಅವರಪ್ಪನಾಣೆ ಮತ್ತೊಮ್ಮೆ ಪ್ರಧಾನಿಯಾಗಲ್ಲ

Narendra Modi is no longer Prime Minister

19-02-2019

ಕುಮಾರಸ್ವಾಮಿ ಅವರಪ್ಪನಾಣೆ ಮುಖ್ಯಮಂತ್ರಿಯಾಗಲ್ಲ ಎಂದು ಹಿಂದೊಮ್ಮೆ ಭವಿಷ್ಯ ನುಡಿದು, ಕೊನೆಗೆ ಕುಮಾರಸ್ವಾಮಿಯವರನ್ನು ತಮ್ಮ ಪಕ್ಷದ ಬೆಂಬಲದಿಂದಲೇ ಮುಖ್ಯಮಂತ್ರಿಯಾಗಿಸಿದ ಮಾಜಿ ಸಿಎಂ ಸಿದ್ಧರಾಮಯ್ಯ ಮತ್ತೊಮ್ಮೆ ಭವಿಷ್ಯ ನುಡಿದಿದ್ದಾರೆ. 
ಹೌದು ನಗರದ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಯುವ ಕಾಂಗ್ರೆಸ್ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದ ಸಿದ್ಧರಾಮಯ್ಯ, ಬಿಜೆಪಿ ತಿಪ್ಪರಲಾಗ ಹಾಕಿದರೂ ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರೋದಿಲ್ಲ. ನರೇಂದ್ರ ಮೋದಿಯವರು ಅವರಪ್ಪನ ಆಣೆಗೂ ಮತ್ತೆ ಪ್ರಧಾನಿಯಾಗಲ್ಲ ಎಂದು ವ್ಯಂಗ್ಯವಾಡಿದ್ದಾರೆ. 

ಕಾಂಗ್ರೆಸ್ ಸರ್ವ ಸದಸ್ಯರ ಸಭೆಯನ್ನು ಸಂಪೂರ್ಣ ಬಿಜೆಪಿ ವಿರುದ್ಧದ ಟೀಕೆಗೆ ಬಳಸಿಕೊಂಡ ಸಿದ್ದರಾಮಯ್ಯ, ಬಿಜೆಪಿ ಪ್ರಜಾಪ್ರಭುತ್ವವನ್ನೇ ನಾಶ ಮಾಡಲು ಹೊರಟಿದೆ. ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಸಂವಿಧಾನವನ್ನೇ ಬದಲಾಯಿಸುತ್ತೇನೆ ಎನ್ನುತ್ತಾರೆ. ನಾನೇನಾದರೂ ಪ್ರಧಾನಿಯಾಗಿದ್ದರೆ ಇಂತಹವರನ್ನು ಜೈಲಿಗೆ ಹಾಕುತ್ತಿದ್ದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಇನ್ನು ಕುಮಾರಸ್ವಾಮಿ ನಾವೇನು ಭೀಕ್ಷುಕರಲ್ಲ ಎಂದಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ನಾವು ಭೀಕ್ಷುಕರಲ್ಲ ಅವರೂ ಭೀಕ್ಷುಕರಲ್ಲ. ಲೋಕಸಭೆ ಚುನಾವಣೆ ವಿಚಾರದಲ್ಲಿಹಾಲಿ ಕಾಂಗ್ರೆಸ್ ಸಂಸದರು ಇರುವ ಕ್ಷೇತ್ರಗಳನ್ನು ಜೆಡಿಎಸ್‍ಗೆ ಬಿಟ್ಟು ಕೊಡಲು ಸಾಧ್ಯವಿಲ್ಲ. ಈ ಬಗ್ಗೆ ನಿನ್ನೆಯ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದರು. 

ಒಟ್ಟಿನಲ್ಲಿ ಮಾಜಿ ಸಿಎಂ  ಸಿದ್ಧರಾಮಯ್ಯ, ಪ್ರಧಾನಿ ಮೋದಿ ಮತ್ತೊಮ್ಮೆ ಪ್ರಧಾನಿಯಾಗಿರೋದಿಲ್ಲ ಎಂದಿದ್ದು  ಇದೀಗ ಚರ್ಚೆಗೆ ಗ್ರಾಸವಾಗಿದ್ದು, ಸಿದ್ಧರಾಮಯ್ಯ ಏನು ಹೇಳ್ತಾರೋ ಅದರ ವಿರುದ್ಧದ ವಿಷಯವೇ ನಡೆಯುತ್ತೆ. ಹೀಗಾಗಿ ಈ ಬಾರಿ ಪ್ರಧಾನಿ ಮೋದಿ ಮತ್ತೊಮ್ಮೆ ಆಯ್ಕೆಯಾಗೋದು ಖಚಿತ ಎಂದು ಬಿಜೆಪಿ ಕಾರ್ಯಕರ್ತರು ಪ್ರತಿಕ್ರಿಯಿಸಿದ್ದಾರೆ. 
 


ಸಂಬಂಧಿತ ಟ್ಯಾಗ್ಗಳು

#Siddaramayya #Prime Minister #Narendra Modi #Bavisya


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ