ಮಹಿಳೆಯ ಕತ್ತು ಸೀಳಿ ಕೊಲೆ

A woman

20-02-2019

ಮಹಿಳೆಯ ಕತ್ತು ಸೀಳಿ ಪತಿಯೇ ಭೀಕರವಾಗಿ ಕೊಲೆಗೈದು ಪರಾರಿಯಾಗಿರುವ ದುರ್ಘಟನೆ ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿನಗರದಲ್ಲಿ ನಡೆದಿದೆ.


ಕೋಲಾರ ಮೂಲದ ರೇಣುಕಾ (31)ಎಂದು ಕೊಲೆಯಾದವರನ್ನು ಗುರುತಿಸಲಾಗಿದೆ.ಪತಿ ಶಂಕರ ನೊಂದಿಗೆ ಎರಡು ದಿನಗಳ ಹಿಂದೆ ನಗರಕ್ಕೆ ಬಂದು ಸೂರ್ಯ ನೆಸ್ಟ್ ಹೋಟೆಲ್‍ನಲ್ಲಿ ತಂಗಿದ್ದ ರೇಣುಕಾ ಅವರನ್ನು ಮಂಗಳವಾರ ರಾತ್ರಿ ಕೊಠಡಿಯಲ್ಲಿ ಕತ್ತು ಸೀಳಿ ಕೊಲೆ ಮಾಡಲಾಗಿದೆ.


ಹೊಟೇಲ್ ಕೊಠಡಿ ಸ್ವಚ್ಛಗೊಳಿಸಲು ಬಂದ ಸಿಬ್ಬಂದಿ ಬೆಳಿಗ್ಗೆ ಬಾಗಿಲು ಬಡಿದಿದ್ದು ಹಲವು ಬಾಗಿಲು ಬಡಿದರೂ ತೆಗೆಯದಿದ್ದರಿಂದ ಆತಂಕಗೊಂಡು ಬಾಗಿಲು ಮುರಿದು ನೋಡಿದಾಗ ರೇಣುಕಾ ಅವರು ಕೊಲೆಯಾಗಿರುವುದು ಕಂಡುಬಂದಿದೆ.


ಕೊಲೆಯಾಗಿರುವ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಉಪ್ಪಾರಪೇಟೆ ಪೊಲೀಸ್ ಇನ್ಸ್‍ಪೆಕ್ಟರ್ ಸತೀಶ್‍ಕುಮಾರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಪತಿ ರೇಣುಕಾ ಅವರನ್ನು ಕೊಲೆಗೈದು ಪರಾರಿಯಾಗಿರಬಹುದು ಎಂದು ಶಂಕಿಸಿರುವ ಪೊಲೀಸರು ಆರೋಪಿಯ ಬಂಧನಕ್ಕೆ ತೀವ್ರ ಶೋಧ ನಡೆಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

#Bangalore #Murder #Woman #Surya Nest


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ