ಆಕ್ರಮ ಸಕ್ರಮಕ್ಕೆ ಮಾರ್ಚ್ ಅಂತ್ಯದವರೆಗೆ ಕಾಲಾವಕಾಶ

 The invasion of the ages is up to the end of March

20-02-2019

ರಾಜ್ಯದ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿನ ಆಕ್ರಮ ಕಟ್ಟಡಗಳನ್ನು ಸಕ್ರಮಗೊಳಿಸಲು ಇದ್ದ ಕಾಲಾವಕಾಶವನ್ನು ಮಾರ್ಚ್ ಅಂತ್ಯದವರೆಗೆ ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಹೇಳಿದ್ದಾರೆ.

ವಿಧಾನಸೌಧದದ ಸಮಿತಿ ಕೊಠಡಿಯಲ್ಲಿಂದು ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು ಈ ವಿಷಯ ತಿಳಿಸಿದರಲ್ಲದೆ,94(ಸಿ) ಹಾಗೂ 94 (ಸಿ) (ಸಿ) ಅಡಿಯಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳ ಕಂದಾಯ ಭೂಮಿಯಲ್ಲಿ ಕಟ್ಟಲಾದ ಆಕ್ರಮ ಕಟ್ಟಡಗಳನ್ನು ಸಕ್ರಮಗೊಳಿಸುವ ಕಾರ್ಯ ತ್ವರಿತಗತಿಯಲ್ಲಿ ನಡೆಯುತ್ತಿದೆ ಎಂದರು.

ಆದರೂ ಆಕ್ರಮ ಕಟ್ಟಡಗಳನ್ನು ಸಕ್ರಮಗೊಳಿಸಲು ಇದ್ದ ಕಾಲಾವಕಾಶವನ್ನು ಇನ್ನಷ್ಟು ಕಾಲ ವಿಸ್ತರಿಸಲು ನಿರ್ಧರಿಸಲಾಗಿದ್ದು ಮಾರ್ಚ್ ಅಂತ್ಯದವರೆಗೆ ಇದನ್ನು ವಿಸ್ತರಿಸಲು ತೀರ್ಮಾನಿಸಲಾಗಿದೆ ಎಂದರು.

ನಗರ ಹಾಗೂ ಗ್ರಾಮೀಣ ಪ್ರದೇಶಗಳ ಆಕ್ರಮ ಕಟ್ಟಡಗಳನ್ನು ಸಕ್ರಮಗೊಳಿಸಲು ವಿಳಂಬ ಮಾಡಲಾಗುತ್ತಿದೆ.ತೀರ್ಮಾನ ತೆಗೆದುಕೊಂಡು ಹಲವು ಕಾಲವಾದರೂ ಅಧಿಕಾರಿಗಳ ವಿಳಂಬ ಧೋರಣೆಯಿಂದ ಸಮಸ್ಯೆಯಾಗುತ್ತಿದೆ ಎಂಬ ಆರೋಪವನ್ನು ಅವರು ತಳ್ಳಿ ಹಾಕಿದರು.

ಅದೇ ರೀತಿ ಬಗರ್ ಹುಕುಂ ಭೂಮಿಯನ್ನು ಸಕ್ರಮಗೊಳಿಸಲು ಸಲ್ಲಿಕೆಯಾದ ಅರ್ಜಿಗಳನ್ನು ಈ ವರ್ಷದ ಏಪ್ರಿಲ್ 26 ರ ಒಳಗೆ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಹಾಗೆಯೇ ಬಗರ್ ಹುಕುಂ ಭೂಮಿಗೆ ಅರ್ಜಿ ಸಲ್ಲಿಸುವವರು ಬಾಕಿ ಇರುವುದರಿಂದ ಜನರಿಗೆ ಅನುಕೂಲವಾಗಲಿ ಎಂಬ ಕಾರಣಕ್ಕಾಗಿ ಅರ್ಜಿ ಸಲ್ಲಿಕೆಗೆ ಮಾರ್ಚ್ ಹದಿನಾರರವರೆಗೆ ಅವಕಾಶ ನೀಡಲು ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದರು.

ಬಗರ್ ಹುಕುಂ ಭೂಮಿಗೆ ಅರ್ಜಿ ಸಲ್ಲಿಸಲು ಮತ್ತಷ್ಟು ಕಾಲಾವಕಾಶ ನೀಡುವುದರಿಂದ ಇದನ್ನು ದುರುಪಯೋಗ ಪಡಿಸಿಕೊಳ್ಳಲು ಅನುಕೂಲ ಮಾಡಿಕೊಟ್ಟಂತಾಗುವುದಿಲ್ಲವೇ?ಎಂಬ ಸುದ್ದಿಗಾರರ ಮಾತನ್ನು ಅವರು ತಳ್ಳಿ ಹಾಕಿದರು.

ರಾಜ್ಯದ ವಿವಿಧ ಭಾಗಗಳಲ್ಲಿ ಈ ಕಾನೂನಿನ ಪ್ರಕಾರ ಬಗರ್ ಹುಕುಂ ಭೂಮಿಯನ್ನು ಪಡೆದುಕೊಳ್ಳಬಹುದು ಎಂಬ ಅರಿವು ಇರದವರು ಬಹಳಷ್ಟು ಜನ ಇದ್ದಾರೆ.ಹೀಗಾಗಿ ಅವರಿಗೆ ಮತ್ತೊಂದು ಅವಕಾಶ ನೀಡಲು ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದರು.


ಸಂಬಂಧಿತ ಟ್ಯಾಗ್ಗಳು

#Karnataka #March #Bhagar Hukum #Govrnment


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ