ಸಭಾಪತಿ ಸ್ಥಾನ ಕೊಟ್ಟರೆ ಅದನ್ನೂ ನಿಭಾಯಿಸುತ್ತೇನೆ !

Kannada News

06-06-2017

ಬೆಂಗಳೂರು:- ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ಕಾಂಗ್ರೆಸ್ ಮುಖಂಡ ಹೆಚ್.ಎಂ.ರೇವಣ್ಣ ಇದೀಗ ವಿಧಾನ ಪರಿಷತ್ ಸಭಾಪತಿ ಸ್ಥಾನದ ಮೇಲೂ ಕಣ್ಣಿಟ್ಟಿದ್ದಾರೆ. ಸಚಿವ ಸ್ಥಾನಕ್ಕೂ ಸೈ, ಸಭಾಪತಿ ಸ್ಥಾನಕ್ಕೂ ಜೈ ಎಂದು ತಮ್ಮ ಅಪೇಕ್ಷೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರವಾನಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಹೆಚ್.ಎಂ.ರೇವಣ್ಣ, ಮುಂದಿನ ಸಭಾಪತಿ ನಾನೆ ಎಂದು ಎಲ್ಲಿಯೂ ಹೇಳಿಕೊಂಡಿಲ್ಲ. ಆದರೆ ಪಕ್ಷ ಯಾವುದೇ ಜವಾಬ್ದಾರಿಯನ್ನು ನೀಡಿದರೂ ಅದನ್ನು ನಿರ್ವಹಿಸುತ್ತೇನೆ. ಒಂದು ವೇಳೆ ಸಭಾಪತಿ ಸ್ಥಾನವನ್ನು ಕೊಟ್ಟರೆ ಅದನ್ನೂ ನಿಭಾಯಿಸಬೇಕಾಗಿದೆ, ಪಕ್ಷ ತೆಗೆದುಕೊಳ್ಳುವ ಯಾವುದೇ ತೀರ್ಮಾನಕ್ಕೂ ನಾನು ಬದ್ಧನಾಗಿರುತ್ತೇನೆ ಎಂದರು. ಈಗಾಗಲೇ ನಮ್ಮ ಪಕ್ಷದಿಂದ ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ನೋಟಿಸ್ ನೀಡಲಾಗಿದೆ. ಅವಿಶ್ವಾಸ ಪ್ರಸ್ತಾವನೆಯನ್ನೂ ಸಲ್ಲಿಸಿದ್ದೇವೆ. ನಿಯಮದ ಪ್ರಕಾರವೇ ಮುಂದಿನ ಪ್ರಕ್ರಿಯೆ ನಡೆಯಲಿದೆ ಎಂದರು.

 

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ