ಮನೆಯ ಬಾಗಿಲು ಮುರಿದು ಲಕ್ಷಾಂತರ ಮೌಲ್ಯದ ವಸ್ತುಗಳ ದರೋಡೆ !

Kannada News

07-06-2017

ಬೆಂಗಳೂರು:- ಹೆಚ್‍ಎಎಲ್‍ನ ಜಗದೀಶ್ವರನಗರದಲ್ಲಿ ಮನೆಯ ಬೀಗ ಮುರಿದು ಒಳನುಗ್ಗಿರುವ ದುಷ್ಕರ್ಮಿಗಳು 40 ಗ್ರಾಂ ಚಿನ್ನಾಭರಣ ಸೇರಿ ಲಕ್ಷಾಂತರ ಮೌಲ್ಯದ ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ. ಜಗದೀಶ್ವರನಗರದ 9ನೇ ಮುಖ್ಯರಸ್ತೆಯ ಅಮರಾವತಿ ಅಪಾರ್ಟ್‍ಮೆಂಟ್‍ನಲ್ಲಿ ವಾಸಿಸುತ್ತಿದ್ದ ಸುರೇಶ್ ಅವರು ನಿನ್ನೆ ಬೆಳಿಗ್ಗೆ ಮೂರನೇ ಮಹಡಿಯಲ್ಲಿದ್ದ ಮನೆಗೆ ಬೀಗ ಹಾಕಿಕೊಂಡು ಹೊರ ಹೋಗಿದ್ದರು. ಕೆಲಸ ಮುಗಿಸಿಕೊಂಡು ರಾತ್ರಿ ಮನೆಗೆ ವಾಪಸಾಗಿ ಬಂದು ನೋಡಿದಾಗ ಮುಂಬಾಗಿಲು ಮುರಿದು ಒಳನುಗ್ಗಿದ್ದ ದುಷ್ಕರ್ಮಿಗಳು ಮನೆಯಲ್ಲಿನ ವಸ್ತುಗಳನ್ನೆಲ್ಲಾ ಚೆಲ್ಲಾಪಿಲ್ಲಿ ಮಾಡಿ 40 ಗ್ರಾಂ ತೂಕದ ಚಿನ್ನಾಭರಣಗಳು 2ಸಾವಿರ ನಗದು ಮತ್ತು ಲಕ್ಷಾಂತರ ಮೌಲ್ಯದ ವಸ್ತುಗಳನ್ನು ದೋಚಿ ಪರಾರಿಯಾಗಿದ್ದರು. ಪ್ರಕರಣ ದಾಖಲಿಸಿಕೊಂಡಿರುವ ಹೆಚ್‍ಎಎಲ್ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ