ಡಿಕೆಶಿ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಐಟಿ 

 IT Staged To High Court Against DK Shivkumar

09-03-2019

ಆದಾಯ ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯದ ತೀರ್ಪಿನಿಂದ ಖುಷಿಯಾಗಿದ್ದ ಸಚಿವ ಡಿ.ಕೆ.ಶಿವಕುಮಾರ್ ಗೆ ಮತ್ತೆ ಸಂಕಷ್ಟ ಎದುರಾಗಿದೆ. ಕೆಳ ನ್ಯಾಯಲಯ ನೀಡಿದ ತೀರ್ಪು ಪ್ರಶ್ನಿಸಿ  ಐಟಿ ಇಲಾಖೆ ಹೈಕೋರ್ಟ್ ಮೊರೆ ಹೋಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಪ್ರತ್ಯೇಕ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ. 

   ಡಿ.ಕೆ.ಶಿವಕುಮಾರ ನಿವಾಸ ಹಾಗೂ ಕಚೇರಿ, ಶಿಕ್ಷಣಸಂಸ್ಥೆಗಳ ಮೇಲೆ ಐಟಿ ದಾಳಿ ನಡೆದಿತ್ತು. ಈ ವೇಳೆ ಆದಾಯ ತೆರಿಗೆ ವಂಚನೆಗೆ ಸಂಬಂಧಿಸಿದಂತೆ ಆದಾಯ ತೆರಿಗೆ ವಿಶೇಷ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಫೆಬ್ರವರಿ 28 ರಂದು ಮೂರು ಪ್ರಕರಣಗಳನ್ನು ವಜಾಗೊಳಿಸಿ ಆದೇಶ ಹೊರಡಿಸಿತ್ತು. 

ಆದರೆ ಇದೀಗ ಕೆಳ ನ್ಯಾಯಾಲಯದ ಆದೇಶ ಪ್ರಶ್ನಿಸಿ ಆದಾಯ ತೆರಿಗೆ ಇಲಾಖೆ  ತೀರ್ಪಿನ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದೆ. 2015-16 ನೇ ಅವಧಿಯಲ್ಲಿ 3.14 ಕೋಟಿ ತೆರಿಗೆ ವಂಚನೆ, 2016-17 ರಲ್ಲಿ 2.56 ಕೋಟಿ ರೂಪಾಯಿ ಹಾಗೂ 2017-18 ರಲ್ಲಿ ಅಂದಾಜು 7.08 ಕೋಟಿ ರೂಪಾಯಿ ತೆರಿಗೆ ವಂಚಿಸಲಾಗಿದೆ ಎಂದು ಆದಾಯ ತೆರಿಗೆ ಇಲಾಖೆ ಕೋರ್ಟ್‍ಗೆ ಸಲ್ಲಿಸಿದ ದೂರಿನಲ್ಲಿ ಉಲ್ಲೇಖಿಸಿದೆ. 
ಹೀಗಾಗಿ ತಮ್ಮ ವಿರುದ್ಧದ ಪ್ರಕರಣಗಳು ಖುಲಾಸೆಯಾದ ಖುಷಿಯಲ್ಲಿದ್ದ ಸಚಿವ ಡಿ.ಕೆ.ಶಿವಕುಮಾರ್‍ಗೆ ಮತ್ತೆ ಸಂಕಷ್ಟ ಎದುರಾಗಿದ್ದು, ವಿಚಾರಣೆಗಾಗಿ ಹೈಕೋರ್ಟ್‍ಗೆ ಅಲೆದಾಡುವಂತಾಗಿದೆ. 


ಸಂಬಂಧಿತ ಟ್ಯಾಗ್ಗಳು

#D.K.Shivkumar #Income Tax #High Court #Problem


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ