ಅತೃಪ್ತ ಶಾಸಕರಿಗೆ ಮತ್ತೊಮ್ಮೆ ಸಂಕಷ್ಟ 

Dissatisfied MLAs  Suffering

09-03-2019

ಪ್ರಧಾನಿ ನರೇಂದ್ರ ಮೋದಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡು ಚುನಾವಣೆಯಲ್ಲಿ ಗೆದ್ದು ಸಂಸದರಾಗುವ ಕನಸಿನಲ್ಲಿರುವ ಶಾಸಕ ಡಾ.ಉಮೇಶ್ ಜಾಧವ್ ಸೇರಿದಂತೆ ಇತರ ನಾಲ್ವರು ಶಾಸಕರಿಗೆ ಸಂಕಷ್ಟ ಎದುರಾಗಿದೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಉಮೇಶ್ ಜಾಧವ್ ಹಾಗೂ ಮೂವರು ಕಾಂಗ್ರೆಸ್ ಶಾಸಕರಿಗೆ  ಸ್ಪೀಕರ್ ರಮೇಶ್‍ಕುಮಾರ್ ನೊಟೀಸ್ ಜಾರಿ ಮಾಡಿದ್ದು, ತಮ್ಮ ಮುಂದೆ ವಿಚಾರಣೆಗೆ ಹಾಜರಾಗಿ ಸ್ಪಷ್ಟನೆ ನೀಡುವಂತೆ ಸೂಚಿಸಿದ್ದಾರೆ. 

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ಧರಾಮಯ್ಯ ನೇತೃತ್ವದ ಸಮಿತಿ ಶಾಸಕ ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ, ಬಿ.ನಾಗೇಂದ್ರ,ಉಮೇಶ್ ಜಾಧವ್ ಅವರ ಶಾಸಕತ್ವ ಅನರ್ಹಗೊಳಿಸುವಂತೆ  ಸ್ಪೀಕರ್‍ಗೆ ದೂರು ನೀಡಿದ್ದರು. ಈ ದೂರು ಆದರಿಸಿ ಸ್ಪೀಕರ್ ರಮೇಶ್ ಕುಮಾರ್ ಸಂಬಂಧಿಸಿದ ಶಾಸಕರಿಗೆ ನೊಟೀಸ್ ಜಾರಿ ಮಾಡಿದ್ದಾರೆ. 

ಇನ್ನು ಉಮೇಶ್ ಜಾಧವ್ ಈಗಾಗಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೀಗಿದ್ದಾಗಲೂ ರಾಜೀನಾಮೆ ಅಂಗೀಕರಿಸದೇ ನೊಟೀಸ್ ಜಾರಿ ಮಾಡಿರೋದು ಕುತೂಹಲಕ್ಕೆ ಕಾರಣವಾಗಿದೆ. ಮಾರ್ಚ್ 12 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದ್ದು, ಮತ್ತೊಮ್ಮೆ ಸ್ಪಷ್ಟನೆ ನೀಡುವಂತೆ ಸ್ಪೀಕರ್ ಆದೇಶಿಸಿದ್ದಾರೆ.

ಇನ್ನೊಂದೆಡೆ  ಉಮೇಶ್ ಜಾಧವ್ ಅವರನ್ನು ಬಿಜೆಪಿಯಿಂದ ಸ್ಪರ್ಧಿಸದಂತೆ ತಡೆಯಲು ಈ ತಂತ್ರ ಅನುಸರಿಸಲಾಗುತ್ತಿದ್ದು,  ಉಮೇಶ್ ಜಾಧವ್ ಅವರ ಮೇಲೆ ಪಕ್ಷಾಂತರ ನಿಷೇದ ಕಾಯಿದೆ ಹೇರಿ ಅವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸದಂತೆ ತಡೆಯುವ ಪ್ರಯತ್ನ ಇದಾಗಿದೆ ಎಂಬ ಸಂದೇಹವೂ ವ್ಯಕ್ತವಾಗಿದೆ. 


ಸಂಬಂಧಿತ ಟ್ಯಾಗ್ಗಳು

#Karnataka #Dissatisfied MLAs #Speaker #Notice


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ