ರಾಜ್ಯದಲ್ಲಿ ಸಿಇಟಿ ಪರೀಕ್ಷೆ ಮುಂದೂಡಿಕೆ? 

 CET test postponed in state

11-03-2019

ಕೇಂದ್ರ ಎಲ್ಲ ಪರೀಕ್ಷೆಗಳು ಹಾಗೂ ಹಬ್ಬಗಳನ್ನು ಪರಿಶೀಲಿಸಿ ಚುನಾವಣಾ ದಿನಾಂಕ ಘೋಷಣೆ ಮಾಡಿರುವುದಾಗಿ ಹೇಳಿಕೊಂಡಿದ್ದರೂ ಕರ್ನಾಟಕದಲ್ಲಿ ಸಿಇಟಿ ಪರೀಕ್ಷೆಗೆ ಲೋಕಸಭಾ ಚುನಾವಣೆ ಅಡ್ಡಿಯಾಗಿದೆ.  ಈ ಹಿನ್ನೆಲೆಯಲ್ಲಿ ಇಂದು ಶಿಕ್ಷಣ ಇಲಾಖೆ ಇಂದು ಪರೀಕ್ಷಾ ದಿನಾಂಕವನ್ನು ಬದಲಾಯಿಸುವ ಸಾಧ್ಯತೆ ಇದೆ. 

ಏಪ್ರಿಲ್ 23 ಹಾಗೂ 24 ರಂದು  ಸಾಮಾನ್ಯ ಪ್ರವೇಶ ಪರೀಕ್ಷೆ ಸಿಇಟಿ ನಡೆಸಲು ನಿರ್ಧರಿಸಲಾಗಿತ್ತು. ಈಗಿನ ಪರೀಕ್ಷಾ ವೇಳಾಪಟ್ಟಿ ಪ್ರಕಾರ ಏಪ್ರಿಲ್ 23 ರಂದು ಜೀವಶಾಸ್ತ್ರ ಮತ್ತು ಗಣಿತ ಹಾಗೂ ಏಪ್ರಿಲ್ 24 ರಂದು  ಭೌತಶಾಸ್ತ್ರ ಹಾಗೂ ರಸಾಯನಶಾಸ್ತ್ರ ಪರೀಕ್ಷೆ ನಿಗದಿಯಾಗಿತ್ತು. '
ಆದರೆ ಕರ್ನಾಟಕದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಏಪ್ರಿಲ್ 23 ರಂದು 14 ಜಿಲ್ಲೆಗಳಿಗೆ ಚುನಾವಣೆ ನಡೆಯಲಿದೆ. ಹೀಗಾಗಿ ಪರೀಕ್ಷೆ ದಿನಾಂಕ ಬದಲಾಯಿಸುವ ಅಗತ್ಯವಿದೆ. ಹೀಗಾಗಿ ಇಂದು ಅಧಿಕಾರಿಗಳು ಚರ್ಚೆ ನಡೆಸಿ ಪರೀಕ್ಷೆ ದಿನಾಂಕವನ್ನು ಬದಲಾಯಿಸುವ ಸಾಧ್ಯತೆ ಇದೆ. 


ಸಂಬಂಧಿತ ಟ್ಯಾಗ್ಗಳು

#Karnataka #Lok shabha #CET Exam #Election


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ