ಸಧ್ಯ ಜಮ್ಮುಕಾಶ್ಮೀರದಲ್ಲಿ ಚುನಾವಣೆ ಇಲ್ಲ

11-03-2019
ಲೋಕಸಭೆ ಚುನಾವಣೆ ದಿನಾಂಕ ನಿಗದಿಪಡಿಸಿದ ಕೇಂದ್ರ ಚುನಾವಣಾ ಆಯೋಗವು, ಸಧ್ಯ ಜಮ್ಮು-ಕಾಶ್ಮೀರದಲ್ಲಿ ಲೋಕಸಭಾ ಚುನಾವಣೆ ನಡೆಸಲು ಸಾಧ್ಯವಿಲ್ಲ ಎಂದಿದ್ದು, ಇದಕ್ಕೆ ಜಮ್ಮು-ಕಾಶ್ಮೀರ ಸೇರಿದಂತೆ ದೇಶದಾದ್ಯಂತ ಟೀಕೆ ವ್ಯಕ್ತವಾಗಿದೆ.
ಪುಲ್ವಾಮಾ ಜಿಲ್ಲೆಯಲ್ಲಿ ಯೋಧರನ್ನು ಬಲಿ ಪಡೆದ ಆತ್ಮಾಹುತಿ ದಾಳಿ ಬಳಿಕ ಕಣಿವೆ ರಾಜ್ಯದ ಪರಿಸ್ಥಿತಿ ತಿಳಿಗೊಂಡಿಲ್ಲ. ಇನ್ನು ಸಂಪೂರ್ಣ ಶಾಂತಿ ಕಾಪಾಡಿಕೊಳ್ಳುವುದು ಸಾಧ್ಯವಾಗಿಲ್ಲ. ಹೀಗಾಗಿ ಸಧ್ಯ ಚುನಾವಣೆ ನಡೆಸುವುದು ಸಾಧ್ಯವಿಲ್ಲ ಎಂದು ಚುನಾವಣಾ ಆಯೋಗ ಹೇಳಿದೆ.
ಸಧ್ಯ ಜಮ್ಮು ಕಾಶ್ಮೀರದಲ್ಲಿ ರಾಜ್ಯಪಾಲರ ಆಡಳಿತವಿದ್ದು, ಕಾಶ್ಮೀರದಲ್ಲಿನ ಪರಿಸ್ಥಿತಿಯನ್ನು ಮತ್ತೊಮ್ಮೆ ಅವಲೋಕಿಸಿ ಚರ್ಚಿಸಿ ಸಾಧ್ಯವಾದರೇ ಮುಂದಿನ ದಿನದಲ್ಲಿ ಚುನಾವಣಾ ದಿನಾಂಕ ಪ್ರಕಟಿಸಲಾಗುವುದು ಎಂದು ಆಯೋಗ ಹೇಳಿದೆ. ಇನ್ನು ಚುನಾವಣಾ ಆಯೋಗದ ಈ ನಿರ್ಧಾರಕ್ಕೆ ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅಸಮಧಾನ ವ್ಯಕ್ತಪಡಿಸಿದ್ದು, 1996 ರ ಬಳಿಕ ಮೊದಲ ಬಾರಿಗೆ ಜಮ್ಮುಕಾಶ್ಮೀರದಲ್ಲಿ ಸಕಾಲದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿಲ್ಲ. ಹೀಗಾಗಿ ಪ್ರಧಾನಿ ಮೋದಿ ಬಲಿಷ್ಠ ನಾಯಕತ್ವ ಹೊಗಳುವವರು ಈ ಅಂಶವನ್ನು ನೆನಪಿಸಿಕೊಳ್ಳಿ ಎಂದು ಟ್ವಿಟ್ ಮಾಡಿದ್ದಾರೆ.
ಇನ್ನು ಇನ್ನೊರ್ವ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮಫ್ತಿ ಕೂಡಾ ಚುನಾವಣಾ ಆಯೋಗದ ನಿರ್ಧಾರಕ್ಕೆ ಪ್ರತಿಕ್ರಿಯೆ ನೀಡಿದ್ದು, ಜನರು ತಮ್ಮ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಲು ಅವಕಾಶ ನೀಡದೇ ಪ್ರಜಾಪ್ರಭುತ್ವಕ್ಕೆ ಅವಮಾನ ಮಾಡಲಾಗುತ್ತಿದೆ. ಇದರ ಹಿಂದಿನ ಷಡ್ಯಂತ್ರವೇನು ಎಂದು ಪ್ರಶ್ನಿಸಿದ್ದಾರೆ.
ಒಟ್ಟಿನಲ್ಲಿ ವಿಧಾನಸಭೆ ಚುನಾವಣೆಯನ್ನು ಏಕಕಾಲದಲ್ಲಿ ನಡೆಸುವುದಾಗಿ ಮಾತುಕೊಟ್ಟ ತಪ್ಪಿದ ಆಯೋಗದ ನಿರ್ಧಾರ ಈಗ ಕಣಿವೆ ರಾಜ್ಯದಲ್ಲಿ ಹಲವು ಚರ್ಚೆಗಳನ್ನು ಹುಟ್ಟುಹಾಕಿದೆ.
ಒಂದು ಕಮೆಂಟನ್ನು ಹಾಕಿ