ಖಾಸಗಿ ಬಸ್ ಮತ್ತು ಲಾರಿ ನೆಡುವೆ ಡಿಕ್ಕಿ !

Kannada News

07-06-2017

ಕಾರವಾರ:- ಖಾಸಗಿ ಬಸ್ ಮತ್ತು ಲಾರಿ ನೆಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ 7 ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ಭಟ್ಕಳ ತಾಲ್ಲೂಕಿನ ಬೆಳಕೆ ಬಳಿ ನಡೆದಿದೆ. ಬೆಳಗಾವಿಯಿಂದ ಮಂಗಳೂರಿಗೆ ಬಸ್ ಹೋಗುತ್ತಿತ್ತು. ಮಾರ್ಗದ ಮಧ್ಯೆ ಅಪಘಾತ ಸಂಭವಿಸಿದೆ. ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ ಖಾಸಗಿ ಕಂಪನಿಗೆ ಬಸ್ ಸೇರಿದ್ದು, ಬಸ್ ಚಾಲಕನ ಸ್ಥಿತಿ ಚಿಂತಾಜನಕವಾಗಿದೆ, ಗಾಯಗೊಂಡ ಪ್ರಯಾಣಿಕರನ್ನು ಭಟ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ