ಬೆಂಗಳೂರಿನ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಭದ್ರವಾದ ನೆಲೆ ಇದೆ ಎಸ್‌.ಎಮ್‌.ಕೃಷ್ಣ

 The BJP has a strong base in the Lok Sabha constituency in Bangalore- SMK

11-03-2019

ಕುಟುಂಬ ರಾಜಕಾರಣ ಮಾಡಬಾರದು ಎಂಬ ನಿರ್ಬಂಧ ರಾಜ್ಯಾಂಗದಲ್ಲಿ ಇಲ್ಲ. ದೇವೇಗೌಡರ ಕುಟುಂಬ ವರ್ಗದವರು ಚುನಾವಣೆಯಲ್ಲಿ ಸ್ಪರ್ಧಿಸಲು ಯಾವುದೇ ಅಡ್ಡಿ ಇಲ್ಲ, ತಕರಾರು ಇಲ್ಲ, ಯಾರು ಎಲ್ಲಿ ಬೇಕಾದರೂ ಸ್ಪರ್ಧೆ ಮಾಡಬಹುದು. ಇದಕ್ಕೆ ಯಾವುದೇ ಕಟ್ಟುಪಾಡುಗಳಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಹೇಳಿದ್ದಾರೆ.

ಬಿಜೆಪಿ ಮುಖಂಡ ಆರ್. ಅಶೋಕ್ ನೇತೃತ್ವದ ನಿಯೋಗ ಚುನಾವಣಾ ಪ್ರಚಾರದಲ್ಲಿ ಭಾಗವಹಿಸುವಂತೆ ತಮ್ಮನ್ನು ಮನವಿ ಮಾಡಿದ  ನಂತರ  ಸುದ್ದಿಗಾರರೊಂದಿಗೆ ಮಾತನಾಡಿ,  25 ವರ್ಷ ದಾಟಿದವರು, ಚುನಾವಣೆಗೆ ಸ್ಪರ್ಧಿಸಲು ಸ್ವತಂತ್ರರಾಗಿದ್ದಾರೆ. ಹೀಗಾಗಿ ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡಲು ಸ್ವತಂತ್ರರಾಗಿದ್ದಾರೆ. ಜನ, ತುಲನೆ ಮಾಡಿ ಸರಿಯೋ ತಪ್ಪೋ ಎಂಬುದನ್ನು ನಿರ್ಧರಿಸುತ್ತಾರೆ ಎಂದು ಪರೋಕ್ಷವಾಗಿ ನಿಖಿಲ್ ಕುಮಾರ ಸ್ವಾಮಿ ಸ್ಪರ್ಧೆಯನ್ನು ಬೆಂಬಲಿಸಿದ್ದಾರೆ.

ನರೇಂದ್ರ ಮೋದಿ ಅವರು ಉತ್ತಮವಾಗಿ ಕೆಲಸ ಮಾಡಿದ್ದಾರೆ. ದೇಶದ ಜನ ಅವರ ಆಡಳಿತವನ್ನು ಒಪ್ಪಿಕೊಂಡಿದ್ದಾರೆ. ಯಾವುದೇ ಹಗರಣಗಳಿಗೆ ದಾರಿ ಮಾಡಿಕೊಟ್ಟಿಲ್ಲ. ಕಳೆದ ಐದು ವರ್ಷಗಳ ಅವಧಿಯಲ್ಲಿ ದೇಶದ ಆಡಳಿತ ಅಚ್ಚುಕಟ್ಟಾಗಿದೆ. ಅಧಿಕಾರಿಗಳು ಭಯ, ಭಕ್ತಿಯಿಂದ ಕೆಲಸ ಮಾಡುತ್ತಿದ್ದಾರೆ. ಭಾರತ, ಜಾಗತಿಕ ಮಟ್ಟದಲ್ಲಿ ಹೆಸರುವಾಸಿಯಾಗಿದೆ ಎಂದರು.

ರಾಜ್ಯದಿಂದ ಬಿಜೆಪಿಯ ಹೆಚ್ಚು ಅಭ್ಯರ್ಥಿಗಳು ಗೆಲ್ಲಬೇಕು, ಮೋದಿ ಮತ್ತೆ ಪ್ರಧಾನಿಯಾಗಬೇಕು ಎಂದು ತಾವೂ ಕೂಡ ಬಯಸಿದ್ದು ಪಕ್ಷಕ್ಕೆ ಶಕ್ತಿ ತುಂಬಲು ಕೈಲಾದಷ್ಟು ಪ್ರಯತ್ನ ಮಾಡುತ್ತೇನೆ, ಚುನಾವಣಾ ಪ್ರಚಾರ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳುತ್ತೇನೆ ಎಂದರು.

ತಮ್ಮ ಅವಧಿಯಲ್ಲಿ ಬೆಂಗಳೂರಿಗೆ ಮಾಡಿರುವ ಅಭಿವೃದ್ಧಿಯನ್ನು ಜನ ಮರೆಯುವುದಿಲ್ಲ. ನಾನು ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುತ್ತೇನೆ, ಬೆಂಗಳೂರಿನ ಮೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಭದ್ರವಾದ ನೆಲೆ ಇದೆ. ಇಲ್ಲಿ ದೇವೇಗೌಡ ಸೇರಿದಂತೆ ಯಾರೇ ಸ್ಪರ್ಧೆ ಮಾಡಿದರೂ ಬಿಜೆಪಿ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂಬ ಅದಮ್ಯ ವಿಶ್ವಾಸವನ್ನು ಎಸ್‌.ಎಮ್‌.ಕೃಷ್ಣ ವ್ಯಕ್ತಪಡಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

#Bangalore #Lok Sabha #S.M.Krishna #Constituency


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ