ಶಾಂತಿಗೆ ಭಂಗ ತರಲು ಯತ್ನಿಸಿದರೆ ಮುಲಾಜಿಲ್ಲದೆ ಕ್ರಮ- ಕಮೀಷನರ್ ಸುನೀಲ್ ಕುಮಾರ

If Anyone Try to break the peace The action will be Taken- Sunil Kumar

11-03-2019

ಲೋಕಸಭಾ ಚುನಾವಣೆ ನಡೆಯುವ ವೇಳೆ ಕಾನೂನನ್ನು ಕೈಗೆತ್ತಿಕೊಂಡು ಶಾಂತಿಗೆ ಭಂಗ ತರಲು ಪ್ರಯತ್ನಿಸುವವರನ್ನು ಮುಲಾಜಿಲ್ಲದೆ ಬಂಧಿಸಿ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಟಿ. ಸುನಿಲ್ ಕುಮಾರ್ ಅವರು ಎಚ್ಚರಿಸಿದ್ದಾರೆ.

ಬಿಬಿಎಂಪಿ ಕೇಂದ್ರ ಕಛೇರಿಯಲ್ಲಿ ಜಿಲ್ಲಾ ಚುನಾವಣಾ ಆಯುಕ್ತ ಮಂಜುನಾಥ್ ಪ್ರಸಾದ್ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಅವರು ಕಾನೂನನ್ನು ಕೈಗೆತ್ತಿಕೊಂಡು ಶಾಂತಿಗೆ ಭಂಗ ತರಲು ಯತ್ನ ನಡೆಸುವವರ ಮೇಲೆ ನಿಗಾ ವಹಿಸಿ ಬಂಧಿಸಿ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗುವುದು ಎಂದರು.

ಚುನಾವಣೆಯ ಹಿನ್ನಲೆಯಲ್ಲಿ ನಗರದ ಎಲ್ಲಾ ಪೊಲೀಸ್ ಠಾಣಾ ವ್ಯಾಫ್ತಿಯ ರೌಡಿಗಳ ಮನೆಗಳ ಮೇಲೆ ದಾಳಿ ನಡೆಸಿ ಕೆಲವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿ ಎಚ್ಚರಿಕೆ ಕಳುಹಿಸಲಾಗಿದೆ 400ಕ್ಕೂ ಹೆಚ್ಚು ರೌಡಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಲೋಕಸಭಾ ಚುನಾವಣೆ ವೇಳೆ ಧ್ವನಿವರ್ಧಕಗಳನ್ನು ಅಳವಡಿಸುವುದು ಸಭೆ, ಸಮಾರಂಭಗಳನ್ನು ನಡೆಸುವ ಬಗ್ಗೆ ಅನುಮತಿ ಪಡೆಯುವುದು ಕಡ್ಡಾಯ. ಏಕಗವಾಕ್ಷಿ ಪದ್ಧತಿಯಡಿ ಅನುಮತಿ ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದರು.

ಆಯುಧಗಳನ್ನು ಹೊಂದಿರುವ ವ್ಯಕ್ತಿಗಳು ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿಯನ್ನು ಸಲ್ಲಿಸಬೇಕು. ಅಂತವರು ತಮ್ಮ ಆಯುಧಗಳನ್ನು ಇಲಾಖೆ ವಶಕ್ಕೆ ಒಪ್ಪಿಸಬೇಕು.ಬ್ಯಾಂಕ್ ಭದ್ರತೆ ಪಡೆ ಮಾಜಿ ಸೈನಿಕರು ಕೊಡಗಿನ ಜನರು ಇಟ್ಟುಕೊಂಡಿರುವ ಬಂದೂಕುಗಳಿಗೆ ವಿನಾಯಿತಿ ನೀಡಲಾಗಿದೆ.

ಆದರೂ ಡಿಸಿಪಿ ನೇತೃತ್ವದಲ್ಲಿನ ಸಮಿತಿಗೆ ಅವರು ಮಾಹಿತಿಯನ್ನು ಸಲ್ಲಿಸಬೇಕು ಎಂದು ತಿಳಿಸಿದರು.ಚುನಾವಣೆ ವೇಳೆ ಅಡ್ಡಿಪಡಿಸುವ ಗೂಂಡಾಗಳ ಮೇಲೆ ಹದ್ದಿನಕಣ್ಣು ಇಡಲಾಗುವುದು ಎಂದು ಹೇಳಿದ ಅವರು ಕಳೆದ ಬಾರಿ 300 ಪ್ರಕರಣಗಳನ್ನು ದಾಖಲಿಸಲಾಗಿದ್ದು, 299 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದೆ ಎಂದು ತಿಳಿಸಿದರು.


ಸಂಬಂಧಿತ ಟ್ಯಾಗ್ಗಳು

#Bangalore # Action Will be Taken #Peace Break # Sunil Kumar


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ