ಬೆಂಗಳೂರು ದಕ್ಷಿಣದಿಂದ ಕಣಕ್ಕಿಳಿಯಲಿದ್ದಾರೆ ತೇಜಸ್ವಿನಿ ಅನಂತಕುಮಾರ್.

 Tejaswini Ananthkumar will contest from Bangalore South.

12-03-2019

ಬೆಂಗಳೂರಿನಲ್ಲಿ ಬಿಜೆಪಿ ಪಾಲಿಗೆ ಅತ್ಯಂತಪ್ರತಿಷ್ಠೆಯ ಕಣವಾಗಿರುವ ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ಕೊನೆಗೂ ಬಿಜೆಪಿ ಸಮರ್ಥ ಅಭ್ಯರ್ಥಿಯನ್ನೆ ಆಯ್ಕೆ ಮಾಡಿದೆ. ಮಾಜಿ ಕೇಂದ್ರ ಸಚಿವ ಅನಂತಕುಮಾರ್ ಅವರ ಕ್ಷೇತ್ರವಾಗಿದ್ದ ಬೆಂಗಳೂರು ದಕ್ಷಿಣದಲ್ಲಿ ಅವರ ಪತ್ನಿ ತೇಜಸ್ವಿನಿ ಅನಂತಕುಮಾರ್ ಕಣಕ್ಕಿಳಿಯಲಿದ್ದು, ಬಿಜೆಪಿ ಒಮ್ಮತದಿಂದ ಅಭ್ಯರ್ಥಿ ಆಯ್ಕೆ ಘೋಷಿಸಿದೆ. 

ನಿನ್ನೆ ಬಿಜೆಪಿ ಮುಖಂಡ ಆರ್.ಅಶೋಕ್ ಮನೆಯಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ರಾಜ್ಯ ವರಿಷ್ಠರು, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೂಚನೆ ಹಾಗೂ ರಾಜ್ಯ ನಾಯಕರ ಅಭಿಪ್ರಾಯದ ಮೇರೆಗೆ ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. 

ಈ ಹಿಂದೆಯೇ ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ತೇಜಸ್ವಿನಿ ಅನಂತಕುಮಾರ್ ಹೆಸರು ಅಂತಿಮಗೊಳಿಸುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಬಿಜೆಪಿ ಹೈಕಮಾಂಡ್‍ಗೆ ಮನವಿ ಮಾಡಿದ್ದರು. ಆದರೆ ಸ್ಥಳೀಯವಾಗಿ ಆರ್.ಅಶೋಕ್ ಸೇರಿದಂತೆ ಹಲವರು ವಿರೋದ ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ಆದರೆ ತೇಜಸ್ವಿನಿ ಅವರನ್ನು ಕಣಕ್ಕಿಳಿಸಲು ಸ್ವತಃ ಹೈಕಮಾಂಡ್ ಒಲವು ತೋರುತ್ತಿದ್ದಂತೆ ಸ್ಥಳೀಯ ನಾಯಕರು ತಮ್ಮ ಧೋರಣೆ ಬದಲಾಯಿಸಿಕೊಂಡಿದ್ದು, ಚುನಾವಣೆಯಲ್ಲಿ ತೇಜಸ್ವಿನಿ ಅನಂತಕುಮಾರ್ ಅವರನ್ನು ಬೆಂಬಲಿಸಲಿದ್ದಾರೆ. 
ಇನ್ನು ಬಿಜೆಪಿಯ ಈ ನಿರ್ಧಾರವನ್ನು ತೇಜಸ್ವಿನಿ ಅನಂತಕುಮಾರ್ ಸ್ವಾಗತಿಸಿದ್ದು, ನಾನುಅಭ್ಯರ್ಥಿಯಾಗಬೇಕೆಂದು ಕ್ಷೇತ್ರದ ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ. ಹೈಕಮಾಂಡ್ ಕೂಡ  ಇದಕ್ಕೆ ಒಪ್ಪಿಕೊಂಡಿದೆ. ಅವರ ನಂಬಿಕೆಯನ್ನು ಉಳಿಸಿಕೊಂಡು ಹೋಗುವ ಕೆಲಸ ಮಾಡುತ್ತೇನೆ ಎಂದಿದ್ದಾರೆ. ಒಟ್ಟಿನಲ್ಲಿ ಬೆಂಗಳೂರು ದಕ್ಷಿಣಕ್ಕೆ ಬಿಜೆಪಿ ಅಭ್ಯರ್ಥಿಯಾರು ಎಂಬ ಕುತೂಹಲಕ್ಕೆ ಇದೀಗ ತೆರೆ ಬಿದ್ದಿದೆ. 


ಸಂಬಂಧಿತ ಟ್ಯಾಗ್ಗಳು

#Loksabha 2019 #Tejaswini Ananthkumar #Bangalore South #BJP


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


Alcohol Rehab Centers Drug Rehab Drug Rehab Centers Near Me Drug Rehab Centers Inpatient Drug Rehab http://aaa-rehab.com JamesBesee
  • JamesBesee
  • Construction, facilities