ಕಾಂಗ್ರೆಸ್ ಪಕ್ಷದ ಜೊತೆ ಮೈತ್ರಿ ಇಲ್ಲ-ಮಾಯಾವತಿ

 No alliance with Congress party - Mayavati

12-03-2019

ಮಹತ್ವದ ಬೆಳವಣಿಗೆಯೊಂದರಲ್ಲಿ  ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಜೊತೆ ಯಾವ ರಾಜ್ಯದಲ್ಲೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಬಿಎಸ್‍ಪಿ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ. 

ಮಧ್ಯಪ್ರದೇಶದಲ್ಲಿ ಮಾತನಾಡಿದ ಅವರು, ಯಾವುದೇ ರಾಜ್ಯದಲ್ಲಿ ಕಾಂಗ್ರೆಸ್ ಜೊತೆ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವುದಿಲ್ಲ. ಸ್ವತಂತ್ರವಾಗಿ ಸ್ಪರ್ಧಿಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ. 

ಈಗಾಗಲೆ ಉತ್ತರ ಪ್ರದೇಶದಲ್ಲಿ ಎಸ್ಪಿ ಮತ್ತು ಬಿಎಸ್‍ಪಿ  ಮೈತ್ರಿ ಮಾಡಿಕೊಂಡು ಲೋಕಸಭಾ ಚುನಾವಣೆಯನ್ನು ಎದುರಿಸುತ್ತಿವೆ.  ಬಿಎಸ್‍ಪಿ 38 ಕ್ಷೇತ್ರಗಳಲ್ಲಿ ಹಾಗೂ ಎಸ್‍ಪಿ 37 ಕ್ಷೇತ್ರಗಳಲ್ಲಿ ಕಣಕ್ಕಿಳಿಯಲಿದೆ.  ಆರ್‍ಎಲ್‍ಡಿ ಉಳಿದ ಮೂರು ಕ್ಷೇತ್ರಗಳನ್ನು ಪಡೆದಿದೆ.
ಆದರೆ ಅಚ್ಚರಿಯ ಬೆಳವಣಿಗೆಯಲ್ಲಿ ರಾಹುಲ್ ಗಾಂಧಿ ಪ್ರತಿನಿಧಿಸುವ ಅಮೇಥಿ ಹಾಗೂ ಸೋನಿಯಾ ಗಾಂಧಿ ಪ್ರತಿನಿಧಿಸುವ ರಾಯ್ ಬರೇಲಿ ಕ್ಷೇತ್ರವನ್ನು  ಯಾವುದೆ ಮೈತ್ರಿ ಇಲ್ಲದೇ ಕಾಂಗ್ರೆಸ್ ಪಕ್ಷಕ್ಕೆ  ಬಿಟ್ಟುಕೊಡಲಾಗಿದೆ. ಒಟ್ಟಿನಲ್ಲಿ ಬಿಎಸ್‍ಪಿಯ ಈ ಧೀಡಿರ ನಿರ್ಧಾರ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. 


ಸಂಬಂಧಿತ ಟ್ಯಾಗ್ಗಳು

#Loksabha 2019 #No Alliance #Election #Mayavati


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ