ಆಜೀವ ನಿಷೇಧದಿಂದ ಕ್ರಿಕೆಟಿಗ  ಶ್ರೀಶಾಂತ್‍ಗೆ ರಿಲೀಫ್

 Sreesanth is Relieved of life ban

15-03-2019

ಮಹತ್ವದ ಬೆಳವಣಿಗೆಯೊಂದರಲ್ಲಿ ಕ್ರಿಕೆಟಿಗ ಎಸ್.ಶ್ರೀಶಾಂತ್‍ಗೆ  ಸುಪ್ರೀಂಕೋರ್ಟ್ ಸಿಹಿಸುದ್ದಿಯೊಂದನ್ನು ನೀಡಿದೆ.  ಶ್ರೀಶಾಂತ್ ಮೇಲೆ ಹೇರಲಾಗಿದ್ದ ನಿಯಂತ್ರಣವನ್ನು ಸುಪ್ರೀಂಕೋರ್ಟ್ ತೆರವುಗೊಳಿಸಿ ಆದೇಶ ಹೊರಡಿಸಿದೆ. 2013 ರಲ್ಲಿ ಐಪಿಎಲ್ ಮ್ಯಾಚ್ ಪಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಶಾಂತ್ ಮೇಲೆ ನಿಷೇಧ ಹೇರಲಾಗಿತ್ತು. 

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ತಾನ್ ರಾಯಲ್ಸ್ ತಂಡದ ವೇಗಿ ಎಸ್.ಶ್ರೀಶಾಂತ್ ಅವರ ಮೇಲೆ ಆಜೀವ ನಿಷೇಧದ ಶಿಕ್ಷೆ ಹೇರಿತ್ತು. ಈ ನಿಷೇಧ ಪ್ರಶ್ನಿಸಿ  ಶ್ರೀಶಾಂತ್ ಕೇರಳ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ ಕೇರಳ ಹೈಕೋರ್ಟ್ ಬಿಸಿಸಿಐ ನಿರ್ಧಾರವನ್ನೇ ಎತ್ತಿ ಹಿಡಿದಿತ್ತು. ಇದನ್ನು ಪ್ರಶ್ನಿಸಿ ಶ್ರೀಶಾಂತ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. 

ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಶೋಕ್ ಭೂಷಣ್ ಮತ್ತು ಕೆ.ಎಂ.ಜೋಸೆಫ್ ಅವರನ್ನಗೊಳಗೊಂಡ ನ್ಯಾಯಪೀಠ,  ಶ್ರೀಶಾಂತ್ ಅವರಿಗೆ ಬಿಸಿಸಿಐ ನೀಡಿದ್ದ ಶಿಕ್ಷೆಯ ಪ್ರಮಾಣವನ್ನು ಮೂರು ತಿಂಗಳೊಳಗೆ ಮರುಪರಿಶೀಲನೆ ಮಾಡಬೇಕೆಂದು ಆದೇಶಿಸಿದೆ. 
ಅಲ್ಲದೆ ಈ ತೀರ್ಪು ಅವರ ನಿಷೇಧದ ವಿಚಾರಕ್ಕೆ ಮಾತ್ರ ಸಂಬಂಧಿಸಿದ್ದು,  ಅವರ ಮೇಲಿರುವ ಕ್ರಿಮಿನಲ್ ಮೊಕದ್ದಮೆಗಳ ಮೇಲೆ ಈ ತೀರ್ಪು ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 
 


ಸಂಬಂಧಿತ ಟ್ಯಾಗ್ಗಳು

#Cricket #Relieved #Sreesanth # Life Ban


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ