“ನಾನು ಕನ್ನಂಬಾಡಿ ಕಟ್ಟೆ”- ವಿರುದ್ಧ ಮೌನ ಪ್ರತಿಭಟನೆ !

Kannada News

07-06-2017

ಮೈಸೂರು:- ಇತಿಹಾಸ ತಜ್ಞ ಪ್ರೊ. ನಂಜರಾಜ ಅರಸ್ ರಚಿಸಿರುವ “ನಾನು ಕನ್ನಂಬಾಡಿ ಕಟ್ಟೆ” ಹೀಗೊಂದು ಆತ್ಮಕತೆ ಕೃತಿಯಲ್ಲಿ ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ನವರ ಬಗ್ಗೆ ಸಾರ್ವಜನಿಕರಲ್ಲಿ ತಪ್ಪು ಭಾವನೆ ಮೂಡುವಂತೆ ಚಿತ್ರಿಸಲಾಗಿದೆ ಎಂದು ಆರೋಪಿಸಿ, ಮೈಸೂರಿನಲ್ಲಿ ಮೌನ ಪ್ರತಿಭಟನೆ ನಡೆಯಿತು. ಮೈಸೂರಿನ ಇನ್ಸ್‌ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಸಂಸ್ಥೆಯ ಆವರಣದಲ್ಲಿರುವ ವಿಶ್ವೇಶ್ವರಯ್ಯ ನವರ ಪ್ರತಿಮೆ ಮುಂಭಾಗ, ಪ್ರಜ್ಞಾವಂತ ನಾಗರೀಕ ವೇದಿಕೆಯಿಂದ ಮೌನ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ನಗರಪಾಲಿಕೆ ಸದಸ್ಯ ಎಂ.ವಿ ರಾಮಪ್ರಸಾದ್ ಸೇರಿದಂತೆ ಇತರ ಪ್ರಮುಖರು ಭಾಗಿಯಾಗಿದ್ದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ