ವಿದೇಶಿ ಮಹಿಳೆಯನ್ನು ಬೆದರಿಸಿ ದರೋಡೆ !

Kannada News

07-06-2017

ಮೈಸೂರು:- ಯೋಗ ಕಲಿಯಲು ಮೈಸೂರಿಗೆ ಬಂದು ವಾಸ್ತವ್ಯ ಹೂಡಿದ್ದ ವಿದೇಶೀಯರ ಮನೆಗೆ ಕಳ್ಳರು ಲಗ್ಗೆ ಹಾಕಿ ದರೋಡೆ ನಡೆಸಿದ್ದಾರೆ. ಇಂದು ಬೆಳಗಿನಜಾವ 3 ಗಂಟೆ ಸುಮಾರಿಗೆ ಮನೆಗೆ ನುಗ್ಗಿರುವ ಇಬ್ಬರು ಕಳ್ಳರು, ಮಾರಕಾಸ್ತ್ರಗಳನ್ನು ತೋರಿಸಿ ಮೂವರು  ವಿದೇಶೀಯರನ್ನು ಬೆದರಿಸಿ ಅವರ ಬಳಿಯಿದ್ದ ಲ್ಯಾಪ್ ಟಾಪ್, ಮಾನಿಟರ್ ಸೇರಿದಂತೆ ಮತ್ತಿತರ ಬೆಲೆ ಬಾಳುವ ವಸ್ತುಗಳನ್ನು ದೋಚಿಕೊಂಡು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಲಕ್ಷ್ಮೀಪುರಂ ಠಾಣೆ ಪೊಲೀಸರು, ಶ್ವಾನದಳ, ಬೆರಳಚ್ಚು ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ