ಬಿಜೆಪಿಯ ಹಾಲಿ ಸಂಸದರಿಗೆ ಟಿಕೆಟ್ ಸಿಗುವುದು ಬಹುತೇಕ ಖಚಿತ- ಬಿ.ಎಸ್.ಯಡಿಯೂರಪ್ಪ

 All the MPs present in the BJP can get tickets-bsy

20-03-2019

ಬಿಜೆಪಿಯ ಹಾಲಿ ಎಲ್ಲಾ ಸಂಸದರಿಗೆ ಟಿಕೆಟ್ ಸಿಗುವುದು ಬಹುತೇಕ ಖಚಿತ. ಮಂಡ್ಯದಲ್ಲಿ ಅಭ್ಯರ್ಥಿ ಕಣಕ್ಕಿಳಿಸಬೇಕೇ ಅಥವಾ ಬೇಡವೇ ಎಂದು ಪಕ್ಷದ ಹೈಕಮಾಂಡ್ ನಿರ್ಧಾರ ಮಾಡಲಿದೆ ಎಂದು ಬಿಜೆಪಿ ರಾಜ್ಯಾದ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.


ತಮ್ಮ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿಯಲ್ಲಿ ರಾತ್ರಿ ೧ ಗಂಟೆವರೆಗೂ ಚುನಾವಣಾ ಸಮಿತಿ ಸಭೆ ನಡೆಯಿತು.ಟಿಕೆಟ್ ಆಯ್ಕೆ ಬಗ್ಗೆ ಚರ್ಚೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗಿದೆ‌.ಯಾವುದೇ ಕ್ಷಣದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಗಲಿದೆ. ಹಾಲಿ ಎಲ್ಲಾ ಸಂಸದರಿಗೆ ಟಿಕೆಟ್ ಸಿಗುವುದು ಬಹುತೇಕ ಖಚಿತ ಎಂದು ಅವರು ಸ್ಪಷ್ಟಪಡಿಸಿದರು.

ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿ ಕಣಕ್ಕಿಳಿಸುವ ವಿಚಾರವನ್ನು ಪಕ್ಷದ ಹೈಕಮಾಂಡ್ ಗೆ ಬಿಡಲಾಗಿದೆ. ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಸುಮಲತಾ ಅವರನ್ನು ಬೆಂಬಲಿಸಬೇಕ.ಅಥವಾ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಯಾರನ್ನು ಇಳಿಸಬೇಕು ಎಂಬುದರ ಸಾಧಕ ಬಾದಕಗಳ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದರು.  

ತುಮಕೂರಿನ ಕಾಂಗ್ರೆಸ್ ಸಂಸದ ಕ್ಷೇತ್ರ ಕೈತಪ್ಪಿದ ಹಿನ್ನಲೆಯಲ್ಲಿ ಬಿಜೆಪಿ ಸೇರ್ಪಡೆ ಬಗ್ಗೆ ಕೇಳಿರುತ್ತಿರುವ ಸುದ್ದಿಗಳ ಬಗ್ಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಮುದ್ದು ಹನುಮೇಗೌಡ ಅವರು ನಮ್ಮನ್ನು ಸಂಪರ್ಕಿಸಿಲ್ಲ ಎಂದರು.


ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುತ್ತಿರುವ ಹಿನ್ನಲೆಯಲ್ಲಿ ಟಿಕೆಟ್ ಖಾತ್ರಿಯಾಗಿರುವ ಚಲವಾದಿ ನಾರಾಯಣಸ್ವಾಮಿ,ತುಮಕೂರಿನ ಜಿ.ಎಸ್.ಬಸವರಾಜು ಡಾಲರ್ಸ್ ಕಾಲೋನಿಯ ಧವಳಗಿರಿ ನಿವಾಸಕ್ಕೆ ಆಗಮಿಸಿ ಯಡಿಯೂರಪ್ಪ ಅವರಿಗೆ ಧನ್ಯವಾದ ಸಲ್ಲಿಸಿದರು. 


ಸಂಬಂಧಿತ ಟ್ಯಾಗ್ಗಳು

#Loksabha 2019 #Bsy #BJP #Mp Ticket


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ