ಕಾಂಗ್ರೆಸ್ ಇಲ್ಲವೆ ಜೆಡಿಎಸ್ ಚಿಹ್ನೆಯಡಿ ಸ್ಪರ್ಧೆ ಮಾಡಲು ಸಿದ್ಧ- ಮಾಜಿ ಸಚಿವ ಪ್ರಮೋದ್ ಮಧ್ವರಾಜ್

 Former minister Pramod Madhwaraj ready to contest on Congress or JDS symbol

20-03-2019

ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಇಲ್ಲವೆ ಜೆಡಿಎಸ್ ಚಿಹ್ನೆಯಡಿ ಸ್ಪರ್ಧೆ ಮಾಡಲು ಸಿದ್ಧ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.ಸುದ್ದಿಗಾರರ ಜತೆ ಮಾತನಾಡಿದ ಅವರು, ಜೆಡಿಎಸ್ನಾಯಕರು ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಕೇಳಿದ್ದಾರೆ. ಅದೇ ರೀತಿ ಈ ಕ್ಷೇತ್ರವನ್ನು ಕಾಂಗ್ರೆಸ್ ಗೆ ಬಿಟ್ಟುಕೊಡುವಂತೆಯೂ ಪಕ್ಷದ ನಾಯಕರು ಕೋರಿದ್ದಾರೆ. ಹೀಗಾಗಿ ಮಾತುಕತೆ ನಡೆಯುತ್ತಿದೆ ಎಂದರು.

ಹಾಗೊಂದು ವೇಳೆ ಕ್ಷೇತ್ರ ಬಿಟ್ಟು ಕೊಡದಿದ್ದರೆ ಮೈತ್ರಿಅಭ್ಯರ್ಥಿ ಯಾಗಿ ಸ್ಪರ್ಧಿಸಲು ಸಿದ್ಧ. ಪಕ್ಷ ಒಪ್ಪಿಕೊಂಡರೆಅಭ್ಯರ್ಥಿಯಾಗುತ್ತೇನೆ. ತಾವೇ ಅಭ್ಯರ್ಥಿ ಎಂಬುದು ಇನ್ನೂ ಅಂತಿಮವಾಗಿಲ್ಲ. ಕಾಂಗ್ರೆಸ್ ನಾಯಕರುಒಪ್ಪಿಕೊಂಡರೆ ಜೆಡಿಎಸ್ ಚಿಹ್ನೆ ಅಡಿ ಅಭ್ಯರ್ಥಿಯಾಗಿಚುನಾವಣೆಗೆ ಸ್ಪರ್ಧಿಸಲು ಸಿದ್ಧ ಎಂದು ಪ್ರಮೋದ್ ಮಧ್ವರಾಜ್ ಹೇಳಿದರು.

ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್ ತನ್ನ ಮೈತ್ರಿ ಪಕ್ಷ ಜೆಡಿಎಸ್ ಗೆ ಬಿಟ್ಟುಕೊಟ್ಟಿದೆ. ಆದರೆ ಜೆಡಿಎಸ್ ನಲ್ಲಿ ಸಮರ್ಥ ಅಭ್ಯರ್ಥಿಗಳ ಕೊರತೆ ಎದುರಾಗಿದ್ದು, ಪ್ರಮೋದ್ ಮದ್ವರಾಜ್ ಅವರನ್ನು ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಜೆಡಿಎಸ್ ಗೆ ಸ್ವಾಗತಿಸಿದ್ದಾರೆ. ಪಕ್ಷ ಸೇರಿದರೆ ಸ್ಪರ್ಧಿಸಲು ಟಿಕೆಟ್ ನೀಡುವುದಾಗಿ ಕುಮಾರ ಸ್ವಾಮಿ ಭರವಸೆ ನೀಡಿದ್ದಾರೆ.
 


ಸಂಬಂಧಿತ ಟ್ಯಾಗ್ಗಳು

#Loksabha 2019 #Congress #Pramod Madwraj #Jds


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ