ರಾಹುಲ್ ಗಾಂಧಿಯನ್ನು ಪ್ರಧಾನಿ ಮಾಡಲು ಯುವ ಕಾಂಗ್ರೆಸ್ ಶ್ರಮಿಸಬೇಕು !

Kannada News

07-06-2017

ಬೆಂಗಳೂರು:- ರಾಹುಲ್ ಗಾಂಧಿಯನ್ನು ಪ್ರಧಾನಮಂತ್ರಿ ಮಾಡಲು ಯುವ ಕಾಂಗ್ರೆಸ್ ಶ್ರಮಿಸಬೇಕು ಎಂದು ಜಿ ಪರಮೇಶ್ವರ್ ಹೇಳಿದ್ದಾರೆ. ಎಲ್ಲಾ ವರ್ಗದವರನ್ನು ಒಟ್ಟಾಗಿ ತೆಗೆದುಕೊಂಡು ಹೋಗುವುದೇ ಕಾಂಗ್ರೆಸ್ ಪಕ್ಷದ ಸಿದ್ದಾಂತ. ಬಿಜೆಪಿ ಕೋಮುವಾದಿ ಪಕ್ಷ. ದೇಶವನ್ನು ಮತ್ತು ಅಭಿವೃದ್ಧಿಯನ್ನು ಕಾಂಗ್ರೆಸ್ ಮಾಡಿದೆ ಅಂತ ಹೇಳಬೇಕಿದೆ. ಪ್ರಣಾಳಿಕೆಯಲ್ಲಿ ನೀಡಿದ್ದನ್ನೆಲ್ಲಾ ಈಡೇರಿಸಿದ್ದೇವೆ. ೨೦೧೮ ರಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರುವ ವಿಶ್ವಾಸ ಇದೆ ಎಂದರು. ಯುವ ಕಾಂಗ್ರೆಸ್ ಸಮಿತಿ ಕಾಂಗ್ರೆಸ್ ಗೆ ಶಕ್ತಿ ಕೊಡಬೇಕಿದೆ. ಯುವ ಕಾಂಗ್ರೆಸ್ ಚುನಾವಣೆ ನಡೆದಿದೆಯಾದರು ಇನ್ನೂ ಅಸಮಾಧಾನಗಳು ಇವೆ, ಇವುಗಳನ್ನು ಬೇಗ ಬಗೆಹರಿಸಿಕೊಳ್ಳಬೇಕು ಎಂದು ಸೂಚಿಸಿದ್ದಾರೆ. ಸೋನಿಯಾ ಗಾಂಧಿಗೆ ಗೌರವ ನೀಡಿ ಸಮಾನತೆಯಿಂದ ನಡೆಸಿಕೊಂಡು ಹೋಗಬೇಕು. ಅಸಮಾಧಾನಗಳಿಂದ ನಡೆದುಕೊಂಡರೆ ಪಕ್ಷ ಶಿಸ್ಸು ಕ್ರಮ ಕೈಗೊಳ್ಳುತ್ತದೆ ಎಂದು ಪರಮೇಶ್ವರ್ ಎಚ್ಚರಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ