ಮಾರ್ಚ್ 25 ರಂದು ನಿಖಿಲ್ ನಾಮಪತ್ರ ಸಲ್ಲಿಕೆ 

 Nikhil filed nomination on March 25

21-03-2019

ಮಂಡ್ಯ ಕ್ಷೇತ್ರದ ಕಾಂಗ್ರೆಸ್- ಜೆಡಿಎಸ್ ಮೈತ್ರಿಕೂಟ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ಮುಂದಕ್ಕೆ ಹೋಗಿದೆ.

ಸದ್ಯ ಇಂದೇ ನಾಮಪತ್ರ ಸಲ್ಲಿಕೆ ಮಾಡಬೇಕಾಗಿತ್ತಿದ್ದಾರೂ ಕೆಲ ಕಾರಣಗಳಿಂದಾಗಿ ಇದೇ 25 ರಂದು ನಿಖಿಲ್ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ಜ್ಯೋತಿಷಿಗಳ ಸಲಹೆಯಂತೆ ಸಮಯ ನಿಗದಿಪಡಿಸಲಾಗಿದ್ದು, ಗುರುವಾರ ನಾಮಪತ್ರ ಸಲ್ಲಿಸಿದರೆ ಗುರುಬಲ ಕೂಡಿಬರಲಿದೆ ಅನ್ನೋ ನಂಬಿಕೆಯಿಂದಾಗಿ ಇಂದು ನಾಮಪತ್ರ ಮಾಡಲು ನಿಖಿಲ್ ಮುಂದಾಗಿದ್ದರು.ಆದರೆ ಈಗ ಇದ್ದಕ್ಕಿದ್ದಂತೆ ನಾಮಪತ್ರ ಸಲ್ಲಿಕೆಯನ್ನು ರದ್ದು ಮಾಡಿದ್ದಾರೆ.

ಮುಖ್ಯಮಂತ್ರಿ ಕುಮಾರಸ್ವಾಮಿ ಮಾರ್ಚ್ 25ರಂದು ನಿಖಿಲ್ ನಾಮಪತ್ರ ಸಲ್ಲಿಕೆ ವೇಳೆ 80 ಸಾವಿರಕ್ಕೂ ಹೆಚ್ಚು ಜನರ ಮುಂದೆ ಶಕ್ತಿ ಪ್ರದರ್ಶನಕ್ಕೆ ಸಿದ್ಧತೆ ಮಾಡಿಕೊಂಡಿದ್ದಾರೆ. ಬುಧವಾರ ಸುಮಲತಾ ಅವರು ನಾಮಪತ್ರ ಸಲ್ಲಿಸುವ ವೇಳೆಯಲ್ಲಿದ್ದ ಜನರಿಗಿಂತ ಹೆಚ್ಚಿನ ಜನರನ್ನು ಮಾರ್ಚ್ 25ರಂದು ಸೇರಿಸುವುದಕ್ಕೆ ಮಂಡ್ಯ ಜೆಡಿಎಸ್ ನಾಯಕರು ಮುಂದಾಗಿದ್ದಾರೆ.


ಸಂಬಂಧಿತ ಟ್ಯಾಗ್ಗಳು

#Loksabha 2019 #Nomination #Nikhil Kumarswamy #March 25


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ