ತುಮಕೂರಿನಿಂದಲೇ ದೇವೇಗೌಡರು ಸ್ಪರ್ಧಿಸುತ್ತಾರೆ -ಸಚಿವ ಶ್ರೀನಿವಾಸ್ ಹೇಳಿದ್ದಾರೆ.

 Devgowda competes From Tumkur  Minister Srinivas said.

21-03-2019

ತುಮಕೂರಿನಲ್ಲಿ ಮಾತನಾಡಿದ ಅವರು ಮಾಜಿ ಪ್ರಧಾನಿ ದೇವೇಗೌಡ ಅವರು, ಪಕ್ಷದ ಹಿತದೃಷ್ಟಿಯಿಂದ ತುಮಕೂರು ಲೋಕಸಭಾ ಕ್ಷೇತ್ರದಿಂದಲೇ ಸ್ಪರ್ಧಿಸುತ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಮಾರ್ಚ್ 25 ರಂದೇ ಗೌಡರು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ಇದಕ್ಕೂ ಮುನ್ನಾ ದಿನ ಅಂದರೆ 24ಕ್ಕೆ ತುಮಕೂರಿನಲ್ಲಿ ಜೆಡಿಎಸ್ ನಾಯಕರ ಸಭೆ ನಡೆಯಲಿದೆ ಎಂದು ಅವರು ಹೇಳಿದ್ದಾರೆ.ಇತ್ತೀಚೆಗೆ ಉಭಯ ಪಕ್ಷಗಳು ನಡೆಸಿದ್ದ ಸುದ್ದಿಗೋಷ್ಠಿ ವೇಳೆ ಈ ಬಗ್ಗೆ ಮಾತನಾಡಲು ದೇವೇಗೌಡರು ನಿರಾಕರಿಸಿದ್ದರು.ಮಿತ್ರ ಪಕ್ಷ ಕಾಂಗ್ರೆಸ್‍ನ ನಾಯಕರಾದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‍ಸೇರಿದಂತೆ ತಮ್ಮ ಪಕ್ಷದ ನಾಯಕರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಹೇಳಿದ್ದರು.

ಇದೇ ಗಳಿಗೆಯಲ್ಲಿ ದೆಹಲಿಯಲ್ಲಿ ನನ್ನ ಅವಶ್ಯಕತೆ ಎಷ್ಟಿದೆ ಎಂದು ತಿಳಿದುಕೊಂಡು ಅಗತ್ಯ ಬಿದ್ದರೆ ತಮ್ಮ ನಿಲುವು ಸ್ಪಷ್ಟಪಡಿಸುವುದಾಗಿ ಹೇಳಿದ್ದರು.ಈ ಹಿನ್ನೆಲೆಯಲ್ಲಿ ಸಚಿವ ಶ್ರೀನಿವಾಸ್ ಅವರ ಈ ಹೇಳಿಕೆ ಭಾರಿ ಮಹತ್ವ ಪಡೆದುಕೊಂಡಿದೆ.


ಸಂಬಂಧಿತ ಟ್ಯಾಗ್ಗಳು

#Loksabha 2019 #Tumkur #Deve Gowda #Competes


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ