ಪೌರಾಡಳಿತ ಸಚಿವ ಸಿ.ಎಸ್. ಶಿವಳ್ಳಿ ತೀವ್ರ ಹೃದಯಾಘಾತದಿಂದ ನಿಧನ

Minister CS Shivalli died from a severe heart attack

22-03-2019

ಹಿರಿಯ ಕಾಂಗ್ರೆಸ್ ಮುಖಂಡ, ಪೌರಾಡಳಿತ ಸಚಿವ ಸಿ.ಎಸ್. ಶಿವಳ್ಳಿ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. 
ಇಂದು ಬೆಳಗ್ಗೆ ಹೃದಯಾಘಾತಕ್ಕೆ ಒಳಗಾದ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಧ್ಯಾಹ್ನ 1.40ರ ಸಮಯದಲ್ಲಿ ಮೃತಪಟ್ಟಿದ್ದಾರೆ.
ಅವರಿಗೆ 57 ವರ್ಷ ವಯಸ್ಸಾಗಿತ್ತು. ಅವರ ಹಠಾತ್ ನಿಧನದಿಂದ ಬೆಂಬಲಿಗರು, ಸಂಬಂಧಿಕರು ಆಸ್ಪತ್ರೆ ಆವರಣದಲ್ಲಿ ರೋಧಿಸುತ್ತಿದ್ದ ದೃಷ್ಯ ಕಂಡು ಬಂತು. 
ಕುಂದಗೋಳ ಕ್ಷೇತ್ರದಿಂದ 2013 ಮತ್ತು 2018 ರಲ್ಲಿ ಕಾಂಗ್ರೆಸ್ ನಿಂದ ಆಯ್ಕೆಯಾಗಿದ್ದ ಶಿವಳ್ಳಿ, 1999ರಲ್ಲಿ ಒಮ್ಮೆ ಪಕ್ಷೇತರರಾಗಿಯೂ ಗೆದ್ದಿದ್ದರು. ನಂತರ ಕಾಂಗ್ರೆಸ್ ಗೆ ಸೇರ್ಪಡೆಗೊಂಡಿದ್ದರು. ಜನಾನುರಾಗಿಯಾಗಿದ್ದ ಅವರು ತಮಗೆ ಹೃದಯ ಸಂಬಂಧಿ ಸಮಸ್ಯೆ ಇದ್ದರೂ ಸಹ ಲೆಕ್ಕಿಸದೇ ಕ್ಷೇತ್ರ ಮತ್ತು ಸರ್ಕಾರದ ಕೆಲಸದಲ್ಲಿ ತಮ್ಮನ್ನು ತೊಡಗಿಕೊಂಡಿದ್ದರು. 
ಕಿಮ್ಸ್ ಅಧೀಕ್ಷಕ ಡಾ. ಅರುಣ್ ಕುಮಾರ್ ಮಾತನಾಡಿ, ಶಿವಳ್ಳಿ ಅವರಿಗೆ ಹೃದಯ ಸಂಬಂಧಿ ಸಮಸ್ಯೆ ಇತ್ತು. ಇಂದು ಬೆಳಗ್ಗೆ ವಾಂತಿ ಮಾಡಿಕೊಂಡ ನಂತರ ಅವರಿಗೆ ಹೃದಯಾಘಾತವಾಗಿದೆ. ಆಸ್ಪತ್ರೆಯಲ್ಲಿ ಅವರನ್ನು ಉಳಿಸಿಕೊಳ್ಳುವ ಪ್ರಯತ್ನ ಸಫಲವಾಗಿಲ್ಲ ಎಂದರು. 
 


ಸಂಬಂಧಿತ ಟ್ಯಾಗ್ಗಳು

#Hubli #Died #CS Shivalli #Severe heart attack


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ