ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ಕೃಷ್ಣ ಭೈರೇಗೌಡ

 Krishna Bhairagowda to Bangalore North Lok Sabha constituency

26-03-2019

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಹಿನ್ನೆಲೆಯಲ್ಲಿ ಸಚಿವ ಕೃಷ್ಣಬೈರೇಗೌಡ ಇಂದು ಬೆಳಗ್ಗೆ ಮುಖ್ಯಮಂತ್ರಿಹೆಚ್.ಡಿ.ಕುಮಾರಸ್ವಾಮಿಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ.

ಖಾಸಗಿ  ಹೋಟೆಲ್ ನಲ್ಲಿತಂಗಿರುವ ಸಿಎಂ ರನ್ನು ಭೇಟಿ ಮಾಡಿದ ಕೃಷ್ಣಬೈರೇಗೌಡ ಅವರು ಚುನಾವಣೆ ಸಂಬಂಧ ಚರ್ಚೆ ನಡೆಸಿದರು.

ಜೆಡಿಎಸ್ ಪಾಲಿನ ಕ್ಷೇತ್ರವನ್ನು ಕೊನೆಗಳಿಗೆಯಲ್ಲಿ ಕಾಂಗ್ರೆಸ್ ಗೆ ಬಿಟ್ಡುಕೊಟ್ಟ ಹಿನ್ನೆಲೆಯಲ್ಲಿಕಾಂಗ್ರೆಸ್ ನಿಂದಕೃಷ್ಣಬೈರೇಗೌಡಉತ್ತರದಿಂದ ಸ್ಪರ್ಧಿಸುತ್ತಿದ್ದು, ಈ ಸಂಬಂಧ ಸಿಎಂ ಜೊತೆ ಸಮಾಲೋಚನೆ ನಡೆಸಿ ತಮಗೆ ಬೆಂಬಲ ನೀಡುವಂತೆ ಮನವಿ ಮಾಡಿದರುಎನ್ನಲಾಗಿದೆ.

ಬೆಂಗಳೂರು ಉತ್ತರದಿಂದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಸ್ಪರ್ಧೆ ಮಾಡುತ್ತಾರೆಎಂತಲೇ ಸುದ್ದಿ ಹರಡಿತ್ತು. ಆದರೆ, ಗೌಡರುತುಮಕೂರುಕ್ಷೇತ್ರದಿಂದ ಸ್ಪರ್ಧೆ ಮಾಡುವ ಬಗ್ಗೆ ಘೋಷಣೆ ಮಾಡಿದರು. ಹಾಗಾಗಿ, ಉತ್ತರಕ್ಷೇತ್ರಕ್ಕೆಜೆಡಿಎಸ್ ನಿಂದ ಸೂಕ್ತ ಅಭ್ಯರ್ಥಿ ಸಿಗದ ಕಾರಣ, ಉತ್ತರಕ್ಷೇತ್ರವನ್ನುಕಾಂಗ್ರೆಸ್ ಗೆ ಬಿಟ್ಟುಕೊಡಲಾಯಿತು.

ಕಾಂಗ್ರೆಸ್-ಜೆಡಿಎಸ್‍ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡ ನಂತರಇತ್ತೀಚೆಗಷ್ಟೇಎರಡೂ ಪಕ್ಷಗಳು ಲೋಕಸಭೆ ಸೀಟುಗಳನ್ನು ಹಂಚಿಕೆ ಮಾಡಿಕೊಂಡವು. ಕಾಂಗ್ರೆಸ್ಗೆ 20 ಕ್ಷೇತ್ರ ಮತ್ತುಜೆಡಿಎಸ್ಗೆ 8 ಕ್ಷೇತ್ರಗಳು ಎಂದುಎರಡೂ ಪಕ್ಷಗಳ ಮುಖಂಡರು ನಿರ್ಣಯಿಸಿದರು. ಆದರೆ ಬೆಂಗಳೂರು ಉತ್ತರಕ್ಷೇತ್ರದಿಂದಚುನಾವಣೆ ಸ್ಪರ್ಧಿಸಲು ಸೂಕ್ತ ಅಭ್ಯರ್ಥಿಯ ಕೊರತೆ ಉಂಟಾಗಿ ಕಾಂಗ್ರೆಸ್ಗೆ ಮತ್ತೊಂದುಕ್ಷೇತ್ರವನ್ನುಜೆಡಿಎಸ್ ಬಿಟ್ಟುಕೊಡುವಂತಾಯ್ತು.

ಒಂದುಕ್ಷೇತ್ರ ಹೆಚ್ಚುವರಿಯಾಗಿ ಸಿಕ್ಕ ಬೆನ್ನಲ್ಲೇ ಬೆಂಗಳೂರು ಉತ್ತರ ಲೋಕಸಭಾಕ್ಷೇತ್ರದ ವ್ಯಾಪ್ತಿಯಲ್ಲಿ ಬರುವಕಾಂಗ್ರೆಸ್ ಶಾಸಕರು ಸಭೆ ನಡೆಸಿದರು. ಸಿದ್ದರಾಮಯ್ಯ ಅವರ ನಿವಾಸದಲ್ಲಿರಾತ್ರಿ ನಡೆದ ಸಭೆಯಲ್ಲಿ ಸಚಿವ ಕೃಷ್ಣ ಭೈರೇಗೌಡ ಹೆಸರುಅಂತಿಮವಾಗಿದೆ. 

ಕೃಷ್ಣ ಬೈರೇಗೌಡರುಉತ್ತರದಲ್ಲಿಅಭ್ಯರ್ಥಿಯಾಗುವುದಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡಅವರೂ ಸಹಮತ ವ್ಯಕ್ತಪಡಿಸಿದ್ದಾರೆ. ಇಂದು ಮಧ್ಯಾಹ್ನಕೃಷ್ಣಬೈರೇಗೌಡರು ನಾಮಪತ್ರ ಸಲ್ಲಿಸಲಿದ್ದಾರೆ.


ಸಂಬಂಧಿತ ಟ್ಯಾಗ್ಗಳು

#Loksabha 2019 #Bangalore North #Krishna byre gowda #Congress


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ