ಅಸ್ವಾಭಾವಿಕ ಸಾವಿನ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ !

Kannada News

07-06-2017

ಬೆಂಗಳೂರು:- ನಗರದಲ್ಲಿ ನಡೆಯುತ್ತಿರುವ ಅಸ್ವಾಭಾವಿಕ ಸಾವಿನ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ವಿಸೃತ ತನಿಖೆ ನಡೆಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಪ್ರವೀಣ್ ಸೂದ್ ಅವರು ತಿಳಿಸಿದ್ದಾರೆ. ಮೃತದೇಹದ ಗುರುತು ಸಿಗದೆ ಕೊನೆಗೊಳ್ಳುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇವುಗಳನ್ನು ಗಂಭೀರವಾಗಿ ಪರಿಗಣಿಸಿ ಕೂಲಂಕುಷವಾಗಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ. ರೈಲ್ವೆ ಹಳಿಗಳ ಬಳಿ ದೊರೆಯುವ ಮೃತದೇಹಗಳ ಗುರುತನ್ನು ಪತ್ತೆಹಚ್ಚುವಲ್ಲಿ ರೈಲ್ವೆ ಪೊಲೀಸರು ಹೆಚ್ಚಿನ ಶ್ರಮ ವಹಿಸದಿರುವುದು ಸರಣಿ ಕೊಲೆ ಹಂತಕರ ಬಂಧನದಿಂದ ಗೊತ್ತಾಗಿದ್ದು, ಇಂತಹ ಪ್ರಕರಣಗಳನ್ನು ನಗರ ಪೊಲೀಸರು ಗಂಭೀರವಾಗಿ ಪರಿಗಣಿಸಿ ತನಿಖೆ ಕೈಗೊಳ್ಳಲಿದ್ದಾರೆ ಎಂದರು. ಕೊಲೆ ಮಾಡಿ ರೈಲ್ವೆ ಹಳಿಗಳ ಮೇಲೆ ಮೃತದೇಹವನ್ನು ಹಾಕಿದರೆ ರೈಲು ಹರಿಯುವುದರಿಂದ ದೇಹ ತುಂಡು ತುಂಡುಗಳಾಗಲಿದೆ, ಇದರಿಂದ ವೈದ್ಯಕೀಯ ಪರೀಕ್ಷೆಯಲ್ಲಿ ಕೊಲೆಯೋ, ಆತ್ಮಹತ್ಯೆಯೋ ಎನ್ನುವುದನ್ನು ಪತ್ತೆಹಚ್ಚಲು ಕಷ್ಟವಾಗಲಿದೆ. ಇದರಿಂದಾಗಿಯೇ ಹಲವು ಪ್ರಕರಣಗಳಲ್ಲಿ ಆರೋಪಿಗಳು ಸಿಗದೆ ಪ್ರಕರಣಗಳು ಕೊನೆಗೊಳ್ಳುತ್ತಿವೆ ಎಂದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ