ಐಟಿ ಇಲಾಖೆ ಮೂಲಕ ಪ್ರಧಾನಿ ಸರ್ಜಿಕಲ್ ದಾಳಿ ಸಿಎಂ ಟ್ವೀಟ್

 Prime Minister

28-03-2019

ಐಟಿ ಇಲಾಖೆ ಮೂಲಕ ಪ್ರಧಾನಿ ನರೇಂದ್ರ ಮೋದಿಯಿಂದ ಸರ್ಜಿಕಲ್ ದಾಳಿ ನಡೆಯುತ್ತಿದೆ ಎಂದು ಕಿಡಿಕಾರಿ ಐಟಿ ದಾಳಿ ಬಗ್ಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಟ್ವಿಟ್ಟರ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

'ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಐಟಿ ಅಧಿಕಾರಿಗಳ ಮೂಲಕ ಸರ್ಜಿಕಲ್ ಸ್ಟ್ರೈಕ್ ಮಾಡುತ್ತಿದ್ದಾರೆ. ಐಟಿ ಅಧಿಕಾರಿ ಬಾಲಕೃಷ್ಣರಿಗೆ ಸಂವಿಧಾನಾತ್ಮಕ ಹುದ್ದೆಯ ಆಮಿಷವನ್ನೊಡ್ಡಿದ್ದು, ಅವರ ಸಹಾಯದಿಂದ ದಾಳಿ ನಡೆಸುವ ಮೂಲಕ ಪ್ರಧಾನಿ ಅವರು ಕೇಂದ್ರ ಸರ್ಕಾರದ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಜೊತೆಗೆ ಪತ್ರಿಪಕ್ಷಗಳಿಗೆ ತೊಂದರೆ ಕೊಡುತ್ತಿದ್ದಾರೆ' ಎಂದು ಸಿಎಂ ಟ್ವೀಟ್ನಲ್ಲಿ ನೇರ ವಾಗ್ದಾಳಿ ನಡೆಸಿದ್ದಾರೆ.

ಸಿಎಂ ಐಟಿ ದಾಳಿ ಕುರಿತು ನಿನ್ನೆ ಮಾಹಿತಿ ನೀಡಿದ ಬೆನ್ನಲ್ಲೇ ಇಂದು ಬೆಳಗ್ಗೆ ಮೈಸೂರು, ಮಂಡ್ಯ ಮತ್ತು ಹಾಸನ ಸೇರಿದಂತೆ ಸಚಿವ ಪುಟ್ಟರಾಜು ಮತ್ತು ರೇವಣ್ಣ ಅವರ ಆಪ್ತರ ಮೇಲೆ ಐಟಿ ದಾಳಿ ಮಾಡಿದ್ದಾರೆ. ಬಿಜೆಪಿ ಅವರೇ ಉದ್ದೇಶಪೂರ್ವಕವಾಗಿ ಮಾಡಿಸುತ್ತಿದ್ದಾರೆ ಎಂದು ಮೈತ್ರಿ ನಾಯಕರು ಆರೋಪಿಸುತ್ತಿದ್ದಾರೆ.


ಸಂಬಂಧಿತ ಟ್ಯಾಗ್ಗಳು

#Karnataka #Cm Tweet #It Raid #Narendra Modi


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ