ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬಾರದು- ಸಿದ್ದರಾಮಯ್ಯ

 Narendra Modi should not be PM again -Siddaramayya

29-03-2019

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬಾರದು. ಅವರು ಪ್ರಜಾಪ್ರಭುತ್ವಕ್ಕೆ ಮಾರಕ. ಅವರು ಮತ್ತೊಮ್ಮೆ ಪ್ರಧಾನಿಯಾದರೆ ಮತ್ತೆಂದೂ ಚುನಾವಣೆಗಳೇ ನಡೆಯಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿ ಶುಕ್ರವಾರ ಆಯೋಜನೆಗೊಂಡಿದ್ದ ಕಾಂಗ್ರೆಸ್​-ಜೆಡಿಎಸ್​ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ಸಂವಿಧಾನ ಬದಲಾಯಿಸಲೆಂದೇ ನಾವು ಅಧಿಕಾರಕ್ಕೆ ಬಂದಿದ್ದೇವೆ ಎಂದು ಮತಾಂಧ ಅನಂತಕುಮಾರ್​ ಹೆಗ್ಡೆ ಎಂಬಾತ ಹೇಳುತ್ತಾನೆ. ಕೇಂದ್ರ ಸಚಿವನೊಬ್ಬ ಈ ರೀತಿಯ ಹೇಳಿಕೆ ನೀಡುತ್ತಾನೆ ಎಂದಾದರೆ, ಇದಕ್ಕೆ ಪ್ರಧಾನಿ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಷಾ ಅವರ ಕುಮ್ಮಕ್ಕು ಇದೆ ಎಂದೇ ಅರ್ಥ ಎಂದರು.

ಎಲ್ಲ ರಾಜ್ಯಗಳಲ್ಲೂ ಕಾಂಗ್ರೆಸ್​ ಒಳಗೊಂಡಂತೆ ಮಹಾಘಟಬಂಧನ ರಚಿಸಿಕೊಳ್ಳಲಾಗಿದೆ. ಬಿಜೆಪಿಯಂಥ ಕೋಮುವಾದಿ ಪಕ್ಷವನ್ನು ಅಧಿಕಾರದಿಂದ ದೂರವಿಡಲು ಇಂತಹ ಮಹಾಘಟಬಂಧನದ ಅವಶ್ಯಕತೆ ಇದೆ ಎಂದು ಪ್ರತಿಪಾದಿಸಿದರು


ಸಂಬಂಧಿತ ಟ್ಯಾಗ್ಗಳು

#Loksabha 2019 #Siddaramaiah #Narendra Modi #Prime Minister


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ