ಬಿಜೆಪಿ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟ

 The final list of BJP candidates announced

29-03-2019

 ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಬಿಜೆಪಿ ಬಿಡುಗಡೆಗೊಳಿಸಿದೆ. ಕರ್ನಾಟಕದಲ್ಲಿ ಬಾಕಿ ಇದ್ದ ಚಿಕ್ಕೋಡಿ, ರಾಯಚೂರು ಮತ್ತು ಕೊಪ್ಪಳ ಕ್ಷೇತ್ರಗಳಿಗೆ ಬಿಜೆಪಿ ರಾಷ್ಟ್ರೀಯ ಆಯ್ಕೆ ಸಮಿತಿ ಮೂವರು ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ.

ಚಿಕ್ಕೋಡಿಯಿಂದ ಅಣ್ಣಾ ಸಾಹೇಬ್ ಜೊಲ್ಲೆ, ರಾಯಚೂರಿನಿಂದ ಅಮರೇಶ್ ನಾಯಕ್ ಹಾಗು ಕೊಪ್ಪಳದಿಂದ ಹಾಲಿ ಸಂಸದ ಸಂಗಣ್ಣ ಕರಡಿ ಅವರ ಹೆಸರನ್ನು ಬಿಜೆಪಿ ಹೈಕಮಾಂಡ್ ಪ್ರಕಟಿಸಿದೆ.

ಟಿಕೆಟ್‍ಗಾಗಿ ಯಡಿಯೂರಪ್ಪ ಮನೆಗೆ ಅಲೆದಾಡಿದ್ದ ಹಾಲಿ ಸಂಸದ ಕರಡಿ ಸಂಗಣ್ಣ ಕಡೆಗೂ ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ರಮೇಶ್ ಕತ್ತಿಗೆ ಟಿಕೆಟ್ ಕೊಡಿಸಲು ಶತ ಪ್ರಯತ್ನ ಮಾಡಿದ್ದ ಉಮೇಶ್ ಕತ್ತಿಗೆ ನಿರಾಸೆಯಾಗಿದೆ.

ರಾಯಚೂರಿನಲ್ಲಿ ಟಿಕೆಟ್‍ಗಾಗಿ ಭಾರಿ ಸ್ಪರ್ಧೆ ಇತ್ತು. ಶಾಸಕ ಶಿವನಗೌಡ ನಾಯಕ ತಮ್ಮ ಬೆಂಬಲಿಗರಿಗೆ ಟಿಕೆಟ್ ಕೊಡಿಸಲು ತೀವ್ರ ಕಸರತ್ತು ನಡೆಸಿದ್ದರು. ಆದರೆ ಅಂತಿಮವಾಗಿ ಹೈಕಮಾಂಡ್ ಅಮರೇಶ್‍ನಾಯಕ್ ಗೆ ಟಿಕೆಟ್ ನೀಡಿದೆ. ಇನ್ನು ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಗೆ ಬೆಂಬಲ ಘೋಷಿಸಿದ್ದ ಬಿಜೆಪಿ ಬಾಕಿ 27 ಕ್ಷೇತ್ರಗಳಿಗೂ ಹೆಸರು ಪ್ರಕಟಿಸಿದಂತಾಗಿದೆ.


ಸಂಬಂಧಿತ ಟ್ಯಾಗ್ಗಳು

#Loksabha 2019 #Bjp #Karnataka #List


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ